Featured

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ – vishwanews24

ಉಡುಪಿ: ಸೆ.15ರಂದು 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ

ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟ ಹಿಡಿದು ಸಂಭ್ರಮಿಸಲಿದ್ದೇವೆ. ಮೊದಲಿಗೆ ಸಂವಿಧಾನ ಪೀಠಿಕೆ ಓದಿ, ಬಳಿಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಸಂದೇಶ ಸಾರಲಾಗುತ್ತದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದರು.

ಸಂಚಾರದಲ್ಲಿ ಬದಲಾವಣೆ:
ಮಾನವ ಸರಪಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಒಂದು ಗಂಟೆ ಕಾಲ ವಾಹನಗಳು ದ್ವಿಪಥದಲ್ಲಿ ಸಂಚರಿಸಲಿವೆ. ಉಡುಪಿಯಿಂದ ಬೈಂದೂರಿಗೆ ಹೋಗುವಾಗ ಚತುಷ್ಪಥ ರಸ್ತೆಯ ಬಲಭಾಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲಿ ಮಾನವ ಸರಪಳಿ ಇರಲಿದೆ. ಸಮರ್ಥವಾಗಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಶಾಲಾ ಕಾಲೇಜು, ಸಂಘ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದನ್ನು ನಿರ್ವಹಿಸಲಿದ್ದು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ 100 ಮೀಟರ್‌ಗೆ ಓರ್ವ ಸೆಕ್ಷನ್‌ ಆಫೀಸರ್‌, ಪ್ರತಿ 1 ಕಿ.ಮೀ.ಗೆ ಓರ್ವ ಏರಿಯಾ ಆಫೀಸರ್‌, ಪ್ರತಿ 5 ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರ ನಿಯೋಜನೆಯಾಗಿದೆ. ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ, ತುರ್ತು ಸೇವೆಗೆ ಆಯಂಬುಲೆನ್ಸ್‌ ಕೂಡ ಇರಲಿದೆ. ಜಿಲ್ಲೆಯ ವಿವಿಧ ಸಾಂಪ್ರದಾಯಿಕ ಕಲೆಗಳ ಅನಾವರಣವೂ ನಡೆಯಲಿದೆ. ಡ್ರೋನ್‌ ಶೂಟಿಂಗ್‌ ಮಾಡಲಿದ್ದೇವೆ ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago