Featured

ಉಡುಪಿ : ಸೆ.17 ರಂದು 80000 ಲಸಿಕೆ ನೀಡುವ ಗುರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ : ಸೆ.17 ರಂದು 80000 ಲಸಿಕೆ ನೀಡುವ ಗುರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. -Vishwanews24

ಉಡುಪಿ, : ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 100%; ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಆಯೋಜನೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾ ಮಹಾಮೇಳದಲ್ಲಿ ಭಾಗವಹಿಸಿ ಲಸಿಕೆ ಪಡೆಯುವಂತೆ ತಿಳಿಸಿದ ಅವರು, ಇದಕ್ಕಾಗಿ ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ 300 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಎಲ್ಲಾ ಸಮುದಾಯಗಳ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಈ ಲಸಿಕಾ ಮಹಾಮೇಳ ಕಾರ್ಯಕ್ರಮ ಆಯೋಜಿಸುತ್ತಿದ್ದು, ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ಆಯುಷ್ ವೈದ್ಯರು, ಆರೋಗ್ಯ ಸಹಾಯಕರು ಮತ್ತು ಕಾರ್ಯಕರ್ತರು, ಅಂಗನವಾಡಿ ,ಆಶಾ ಕಾರ್ಯಕರ್ತರು, ಎಲ್ಲಾ ಟಾಸ್ಕ್ ಪೋರ್ಸ್ ಸಮಿತಿಗಳ ಸದಸ್ಯರು, ಮೆಡಿಕಲ್ ಕಾಲೇಜಿನ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು 10,02,762 ಗುರಿ ಇದ್ದು, ಇದುವರೆಗೆ 8,471940 (ಶೇ.84.6%) ಮಂದಿಗೆ ಮೊದಲ ಡೋಸ್ ಲಸಿಕೆ ನೀಡಿದ್ದು, ಇದರಲ್ಲಿ 3,45,558 (ಶೇ.34.5%) ಎರಡನೇ ಡೋಸ್ ಪಡೆದಿದ್ದಾರೆ ಎಂದರು.

ಸಾರ್ವಜನಿಕರಿಗೆ ಲಸಿಕೆ ಪಡೆಯುವ ಕುರಿತಂತೆ ಇರುವ ಯಾವುದೇ ಪ್ರಶ್ನೆ ಮತ್ತು ಸಂದೇಹಗಳನ್ನು ಪರಿಹರಿಸಲು, ಸೆಪ್ಟಂಬರ್ 16 ರಂದು ಬೆಳಗ್ಗೆ 10 ರಿಂದ 11 ರ ವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದ್ದು, ಮೊ.ಸಂಖ್ಯೆ. 9663957222 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಕಾವ್ರಾಡಿ, ಬಳ್ಕೂರು ಮತ್ತು ಕಾಡೂರು ಗ್ರಾಮ ಪಂಚಾಯತ್‌ಗಳಲ್ಲಿ 100% ಮೊದಲ ಡೋಸ್ ಲಸಿಕಾಕರಣ ಪೂರ್ಣಗೊಂಡಿದ್ದು, ಉಳಿದ ಪಂಚಾಯತ್‌ಗಳಲ್ಲಿ ಸಂಪೂರ್ಣ ಗುರಿ ಸಾಧನೆ ಕಾರ್ಯ ನಡೆಯುತ್ತಿದೆ. ಸೆಪ್ಟಂಬರ್ 17 ರಂದು ನಡೆಯುವ ಲಸಿಕಾ ಮಹಾಮೇಳದಲ್ಲಿ ಜಿಲ್ಲೆಯ ಗಡಿಭಾಗದ ಗ್ರಾಮಗಳಲ್ಲಿ 100% ಲಸಿಕೆ ನೀಡಲು ಯೋಜನೆ ರೂಪಿಸಿದ್ದು, ಗ್ರಾಮದಲ್ಲಿನ 100-200 ಮನೆಗಳಿಗೆ ಒಬ್ಬ ನೋಡೆಲ್ ಸಿಬ್ಬಂದಿಯನ್ನು ನೇಮಿಸಿದ್ದು, ಅವರಿಗೆ ಇದುವರೆಗೆ ಲಸಿಕೆ ಪಡೆಯದ ಸಾರ್ವಜನಿಕರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಕೊಡಿಸುವ ಜವಾಬ್ದಾರಿ ವಹಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

2 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

2 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

6 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

6 hours ago