Featured

ಉಡುಪಿ : ಸೆ.21ರಂದು ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ – vishwanews24

ಉಡುಪಿ : ಸೆ.21ರಂದು ಕೇಂದ್ರ ಸಚಿವ ವಿ.ಸೋಮಣ್ಣರಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ

ಉಡುಪಿ : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಹತ್ತಾರು ಅಪಘಾತ, ಹಲವು ಜೀವಬಲಿ, ವಿವಿಧ ಸಂಘಟನೆಗಳ ಪ್ರತಿಭಟನೆಗೆ ಕಾರಣವಾದ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169ಎಯ ಇಂದ್ರಾಳಿ ರೈಲ್ವೆ ಓವರ್ ಬ್ರಿಡ್ಜ್‌ಗೆ ಕೊನೆಗೂ ಉದ್ಘಾಟನೆಯ ಮುಹೂರ್ತ ಫಿಕ್ಸ್ ಆಗಿದೆ.

ಸೆ.21ರ ಬೆಳಗ್ಗೆ 11:15ಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಈ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿ, ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಿದ್ದಾರೆ ಎಂದು ಸಚಿವರ ಅಧಿಕೃತ ಪ್ರವಾಸ ಕಾರ್ಯಕ್ರಮದಲ್ಲಿ ಪ್ರಕಟಿಸಲಾಗಿದೆ.

ಸೆ.21ರಂದು ಬೆಳಗ್ಗೆ 9ಗಂಟೆಗೆ ಬೆಂಗಳೂರಿನಿಂದ ಹೊರಟು 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಲ್ಲಿಂದ 11:15ಕ್ಕೆ ಉಡುಪಿಗೆ ಆಗಮಿಸಿ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆಯುವ ಸಚಿವರು ಅಪರಾಹ್ನ 2:45ಕ್ಕೆ ಕುಂದಾಪುರಕ್ಕೆ ತೆರಳಲಿದ್ದಾರೆ.

ಅಪರಾಹ್ನ 3:30ಕ್ಕೆ ಕುಂದಾಪುರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸುವ ಸಚಿವ ವಿ.ಸೋಮಣ್ಣ, ಸಂಜೆ 4:15ಕ್ಕೆ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

8 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

9 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

9 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

10 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

11 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

11 hours ago