Featured

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ – vishwanews24

ಉಡುಪಿ: ಸೆ.24 ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ  ಧರಣಿ

ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದಾಗಿ ಜನವಸತಿ ಪ್ರದೇಶಗಳು ಪರಿಸರ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ ಅತೀ ಸೂಕ್ಷ್ಮ ವಲಯದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಜಡ್ಕಲ್ ಗ್ರಾಪಂನಲ್ಲಿ ಸೆ.19ರಂದು ಈ ವರದಿಯಿಂದ ಜನಜೀವನದ ಮೇಲೆ ಉಂಟಾಗುತ್ತಿರುವ ಪರಿಣಾಮದ ಗಂಭೀರತೆಯ ಸಾಧಕ ಬಾಧಕಗಳನ್ನು ಚರ್ಚಿಸಲು ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ಪಡೆದು ಗ್ರಾಮ ಸಭೆಯ ನಿರ್ಣಯದಂತೆ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಧರಣಿಯಲ್ಲಿ ಪರಿಸರವಾದಿ ಕಲ್ಕುಳಿ ವಿಠಲ ಹೆಗಡೆ, ಜನಪರ ಹೋರಾಟಗಾರ ಜಯನ್ ಮಲ್ಪೆ ಸೇರಿದಂತೆ ಅನೇಕ ಪ್ರಗತಿಪರ ಚಿಂತಕರು, ಸಮಾನ ಮನಸ್ಕರು ಹಾಗೂ ಬಾಧಿತ ಗ್ರಾಮಗಳ ಗ್ರಾಮಸ್ಥರು ಭಾಗವಹಿಸಲಿ ದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುದೂರು ಗ್ರಾಪಂ ಸದಸ್ಯ ಲಕ್ಷ್ಮಣ ಶೆಟ್ಟಿ, ಸಮಿತಿಯ ಪ್ರಮುಖರಾಜ ರಂಜಿತ್ ಎಂ.ವಿ.ಮುದೂರು, ಜಿ.ಬಿ.ಮೋಹನ್ ಜಡ್ಕಲ್, ಜೋಯ್ ವಿ.ಜೆ., ಜನಪರ ಹೋರಾಟಗಾರ ಜಯನ್ ಮಲ್ಪೆ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago