ಉಡುಪಿ : ಸೆ. 29 ರಂದು ಬಿಜೆಪಿ ಪಂಚಾಯತ್ ರಾಜ್ ಪ್ರಶಿಕ್ಷಣ ವರ್ಗ -Vishwanews24
ಉಡುಪಿ : ಸೆ. 29 ರಂದು ಬಿಜೆಪಿ ಪಂಚಾಯತ್ ರಾಜ್ ಪ್ರಶಿಕ್ಷಣ ವರ್ಗ -Vishwanews24
ಉಡುಪಿ : ಜಿಲ್ಲಾ ಬಿಜೆಪಿ ಪಂಚಾಯತ್ರಾಜ್ ಪ್ರಕೋಷ್ಠದ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಪಂಚಾಯತ್ರಾಜ್ ಪ್ರಶಿಕ್ಷಣವನ್ನು ಉಡುಪಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸೆಪ್ಟೆಂಬರ್ ೨೬ ಆದಿತ್ಯವಾರದಂದು ಬೆಳಿಗ್ಗೆ ೯.೩೦ ರಿಂದ ಅಪರಾಹ್ನ ೧.೩೦ ರವರೆಗೆ ಆಯೋಜಿಸಲಾಗಿದೆ.
ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರ್ಕಾರದ ಸನ್ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ವಹಿಸಲಿದ್ದಾರೆ ಮುಖ್ಯ ಅಥಿತಿಗಳಾಗಿ ಸನ್ಮಾನ್ಯ ಉಡುಪಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ , ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ರಾಜ್ಯ ಬಿಜೆಪಿ ಪಂಚಾಯತ್ರಾಜ್ ಪ್ರಕೋಷ್ಠದ ಸದಸ್ಯರಾದ ಸಾಣೂರು ನರಸಿಂಹ ಕಾಮತ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯಕುಮಾರ್ ಉದ್ಯಾವರ ಉಪಸ್ಥಿತರಿರುವರು.
“ಪಂಚಾಯತ್ರಾಜ್ ಆಡಳಿತ ಮತ್ತು ಪಕ್ಷ ಸಂಘಟನೆ” ಎನ್ನುವ ವಿಷಯಕ್ಕೆ ಸಂಬAಧಿಸಿದAತೆ ಪ್ರಶಿಕ್ಷಣವನ್ನು ಸಾಣೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಾಣೂರು ನರಸಿಂಹ ಕಾಮತ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ನಡೆಸಿಕೊಡಲಿದ್ದಾರೆ.
ಸಮಾರೋಪ ಸಮಾರಂಭದ ಮುಖ್ಯ ಅಥಿತಿಗಳಾಗಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ಇವರು ಸಮಾರೋಪ ಭಾಷಣ ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ಬೈಂದೂರು ಶಾಸಕರಾದ ಬಿ.ಎಮ್.ಸುಕುಮಾರ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಶ್ರೀ ಉದಯಕುಮಾರ್ ಶೆಟ್ಟಿ ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪಂಚಾಯತ್ರಾಜ್ ಪ್ರಕೋಷ್ಠದ ಸಂಚಾಲಕರಾದ ರಾಜೀವ್ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
