Featured

ಉಡುಪಿ : ಸೆ. 29 ರಂದು ಬಿಜೆಪಿ ಪಂಚಾಯತ್ ರಾಜ್ ಪ್ರಶಿಕ್ಷಣ ವರ್ಗ -Vishwanews24

ಉಡುಪಿ : ಸೆ. 29 ರಂದು ಬಿಜೆಪಿ ಪಂಚಾಯತ್ ರಾಜ್ ಪ್ರಶಿಕ್ಷಣ ವರ್ಗ -Vishwanews24

ಉಡುಪಿ : ಜಿಲ್ಲಾ ಬಿಜೆಪಿ ಪಂಚಾಯತ್‌ರಾಜ್ ಪ್ರಕೋಷ್ಠದ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳಿಗೆ ಪಂಚಾಯತ್‌ರಾಜ್ ಪ್ರಶಿಕ್ಷಣವನ್ನು ಉಡುಪಿ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸೆಪ್ಟೆಂಬರ್ ೨೬ ಆದಿತ್ಯವಾರದಂದು ಬೆಳಿಗ್ಗೆ ೯.೩೦ ರಿಂದ ಅಪರಾಹ್ನ ೧.೩೦ ರವರೆಗೆ ಆಯೋಜಿಸಲಾಗಿದೆ.

ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರ್ಕಾರದ ಸನ್ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ವಹಿಸಲಿದ್ದಾರೆ ಮುಖ್ಯ ಅಥಿತಿಗಳಾಗಿ ಸನ್ಮಾನ್ಯ ಉಡುಪಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ , ಕರಾವಳಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ರಾಜ್ಯ ಬಿಜೆಪಿ ಪಂಚಾಯತ್‌ರಾಜ್ ಪ್ರಕೋಷ್ಠದ ಸದಸ್ಯರಾದ ಸಾಣೂರು ನರಸಿಂಹ ಕಾಮತ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯಕುಮಾರ್ ಉದ್ಯಾವರ ಉಪಸ್ಥಿತರಿರುವರು.

“ಪಂಚಾಯತ್‌ರಾಜ್ ಆಡಳಿತ ಮತ್ತು ಪಕ್ಷ ಸಂಘಟನೆ” ಎನ್ನುವ ವಿಷಯಕ್ಕೆ ಸಂಬAಧಿಸಿದAತೆ ಪ್ರಶಿಕ್ಷಣವನ್ನು ಸಾಣೂರು ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸಾಣೂರು ನರಸಿಂಹ ಕಾಮತ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ನಡೆಸಿಕೊಡಲಿದ್ದಾರೆ.

ಸಮಾರೋಪ ಸಮಾರಂಭದ ಮುಖ್ಯ ಅಥಿತಿಗಳಾಗಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ಇವರು ಸಮಾರೋಪ ಭಾಷಣ ಮಾಡಲಿದ್ದು, ಮುಖ್ಯ ಅಥಿತಿಗಳಾಗಿ ಬೈಂದೂರು ಶಾಸಕರಾದ ಬಿ.ಎಮ್.ಸುಕುಮಾರ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಶ್ರೀ ಉದಯಕುಮಾರ್ ಶೆಟ್ಟಿ ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪಂಚಾಯತ್‌ರಾಜ್ ಪ್ರಕೋಷ್ಠದ ಸಂಚಾಲಕರಾದ ರಾಜೀವ್ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

23 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago