ಉಡುಪಿ : ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆ ಪರಿಸಮಾಪ್ತಿಯ ಪ್ರಯುಕ್ತ ಅಷ್ಟೋತ್ತರ ಶತ ಪುಣ್ಯ ಕ್ಷೇತ್ರ ಯಾತ್ರಾಮಂಗಲೋತ್ಸವ ಇದರ ಅಂಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಸೆ.29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಾಯಿ ಈಶ್ವರ್ ಗುರುಜಿ ಅವರು, ಅಪಾರ ಸಂಖ್ಯೆಯ ದೇಶ ಭಕ್ತರು, ಸಾಧು-ಸಂತರು, ಯೋಧರು ಹಾಗೂ ಮಠದ ಅಭಿಮಾನಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದರ ಜೊತೆಗೆ ಶ್ರೀ ಸಾಯಿ ಈಶ್ವರ್ ಗುರೂಜಿ ಇವರ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಭಾಗ್ಯದಯಕ್ಕಾಗಿ ದುರ್ಗಾಷ್ಟಮಿಯ ಪ್ರಯುಕ್ತ “ಶ್ರೀಸೌಭಾಗ್ಯ’ ಎಂಬ 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ ಅ 11ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಂದು ಹೆಸರು ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7619115623, 7026293111 ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟ್‌ನ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಮಠದ ಟ್ರಸ್ಟಿ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್.ಶೆಟ್ಟಿ ಮತ್ತು ರಾಘವೇಂದ್ರ ಕರ್ವಾಲು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…