ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 5ರಂದು ರಥಬೀದಿಯಲ್ಲಿ ವಿಟ್ಲಪಿಂಡಿ–ಶ್ರೀಕೃಷ್ಣಲೀಲೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4ರಂದು ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ ಅರ್ಥ್ಯ ಪ್ರದಾನ ನಡೆಯಲಿದೆ. ಸೆ. 5ರಂದು ಬೆಳಿಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ರಾಜಾಂಗಣದಲ್ಲಿ ಹುಲಿವೇಷ ಕುಣಿತ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.
ಅಷ್ಟಮಿ ವಿಟ್ಲಪಿಂಡಿ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿಶೇಷ ವೇದಿಕೆಯಲ್ಲಿ ಹುಲಿವೇಷ ಸ್ಪರ್ಧೆ ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದ ಕಲಾವಿದರಿಂದ ಕಲಾ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದರು.
ಸೆ. 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಅಷ್ಟಮಂಗಲ ಪ್ರಶ್ನೆಯ ಅನುಸಾರದಂತೆ ಅಂದು ಕೋಟಿ ತುಳಸಿ ಅರ್ಚನೆ ಕೈಗೊಳ್ಳಲಾಗಿದೆ ಎಂದು ಶಿರೂರು ಶ್ರೀಗಳು ತಿಳಿಸಿದರು.
ಭಕ್ತಿ, ಧಾರ್ಮಿಕ ಆಚರಣೆ, ಸಾಂಸ್ಕೃತಿಕ ವೈಭವ ಹಾಗೂ ಜನಪದ ಕಲಾ ಪ್ರದರ್ಶನಗಳ ಸಮ್ಮಿಲನದೊಂದಿಗೆ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವವನ್ನು ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆದಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಠದ ದಿವಾನ ಉದಯಕುಮಾರ್ ಸರಳ್ತಾಯ ಉಪಸ್ಥಿತರಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…