ಉಡುಪಿ: ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ನೀಡಲ್ಪಡುವ ‘ಶಾರದಾ ಕೃಷ್ಣ’ ಪ್ರಶಸ್ತಿಗೆ ಕಿರುತೆರೆ ನಟ, ರಂಗನಿರ್ದೇಶಕ ಎಸ್.ಎನ್. ಸೇತುರಾಮ್ ಅವರು ಆಯ್ಕೆಯಾಗಿದ್ದಾರೆ.
ಇದೇ ಬರುವ ಜನವರಿ ತಿಂಗಳಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ತಿಳಿಸಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಫಲಕವನ್ನು ಒಳಗೊಂಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷೆ ಡಾ. ಭಾರ್ಗವಿ ಐತಾಳ್, ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಸದಸ್ಯ ವಾಸುದೇವ ಅಡಿಗೆ ಇದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…