ಉಡುಪಿ: ವಾರದ ಹಿಂದೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗಿಲ್ಲ. ಈತ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಪುನೀತ್ (26) ನಾಪತ್ತೆಯಾದ ಯುವಕ.
ಇದೀಗ ಆತನ ಸಂಬಂಧಿಕರು ಕಾಪು ಠಾಣೆಯಲ್ಲಿ ಯುವಕ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದು ನಾಪತ್ತೆ ಪ್ರಕರಣ ದಾಖಲಾಗಿದೆ.
ಇಂದು ಬೆಳಿಗ್ಗಿನಿಂದಲೇ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ, ಮತ್ತು ಉಡುಪಿ ಜಿಲ್ಲಾ ಅಗ್ನಿ ಶಾಮಕ ದಳದ ಸಿಬ್ಬಂದಿ ಸೇತುವೆಯಿಂದ ಸುಮಾರು 8 ಕಿಲೋ ಮೀಟರ್ ದೂರದವರಗೆ ಹುಡುಕಾಟ ನಡೆಸಿದ್ದಾರೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ.
ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಸ್ಕೂಟರ್‌ನಲ್ಲಿ ಆತನ ಪರ್ಸ್, ಪೋನ್ ಇತ್ಯಾದಿ ಸಿಕ್ಕಿದ್ದು, ಅದರ ಆಧಾರದಲ್ಲಿ ಆತನ ಗುರುತು ಪತ್ತೆಯಾಗಿತ್ತು.
ಘಟನೆ ನಡೆದ ದಿನ ಮೃತದೇಹಕ್ಕಾಗಿ ಸಾಕಷ್ಟು ಹುಡುಕಾಟ ನಡೆಸಿದ್ದರೂ ವಿಪರೀತ ಮಳೆಯ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿ ಕೈಬಿಡಲಾಗಿತ್ತು.
ಘಟನೆ ನಡೆದು 6 ದಿನದ ಬಳಿಕವೂ ಮೃತದೇಹ ಪತ್ತೆಯಾಗಿಲ್ಲ. ನದಿ ನೀರಿನ ಹರಿವು ತೀವ್ರವಾಗಿರುವುದರಿಂದ ಕೊಚ್ಚಿಹೋಗಿರುವ ಸಾಧ್ಯತೆ ಇದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…