Featured

ಉಡುಪಿ: ಸೇನಾ ನೇಮಕಾತಿ ; ರಸ್ತೆಬದಿ ಮಲಗಿದ ಯುವಕರು  : ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಜಗದೀಶ್ -Vishwanews24

ಉಡುಪಿ ಸೇನಾ ನೇಮಕಾತಿ ; ರಸ್ತೆಬದಿ ಮಲಗಿದ ಯುವಕರು  : ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ ಜಗದೀಶ್ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದೆ. ಜಿಲ್ಲಾ ಸರಕಾರಿ ಅಜ್ಜರಕಾಡು ಮೈದಾನದಲ್ಲಿ ನಡೆಯುವ ಈ ಪ್ರಕ್ರಿಯೆಯಲ್ಲಿ ಪ್ರತಿದಿನ ಮೂರು ಸಾವಿರಕ್ಕಿಂತಲೂ ಹೆಚ್ಚು ಯುವಕರು ಪಾಲ್ಗೊಳ್ಳುತ್ತಿದ್ದಾರೆ. ಆಯ್ಕೆ ಪ್ರಕ್ರಿಯೆಗೆ ಬರುವ ಹೊರಜಿಲ್ಲೆಯ ಯುವಕರಿಗೆ ಮೂಲಭೂತ ಸೌಕರ್ಯದ ಕೊರತೆ ಮಾಡಿಕೊಟ್ಟಿರುವುದಿಲ್ಲ ಎಂದು ಕೆಲವೊಂದು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ದನಿ ಎತ್ತಿದ್ದಾರೆ.

ಭವಿಷ್ಯದ ಸೈನಿಕರು ರಾತ್ರಿ ರಸ್ತೆಬದಿ ಮಲಗಿ ಕತ್ತಲು ಕಳೆಯುತ್ತಿದ್ದಾರೆ. ಒಂದು ದಿನ ಮೊದಲೇ ಉಡುಪಿಗೆ ಬರುವ ಯುವಕರು ಪಾರ್ಕು ರಸ್ತೆಬದಿ, ಫುಟ್ಪಾತ್ ಮೇಲೆ ಹಗಲು-ರಾತ್ರಿ ಕಳೆಯುತ್ತಿದ್ದಾರೆ. ರಾತ್ರಿ ರಸ್ತೆ ಬಳಿ ಸೂಕ್ತ ವ್ಯವಸ್ಥೆ ಮಾಡಿಕೊಟ್ಟಿಲ್ಲ. ಉಡುಪಿ ಜಿಲ್ಲೆಯಲ್ಲಿ ನಡೆಯುವ ಸೇನಾ ನೇಮಕಾತಿ ಪ್ರಕ್ರಿಯೆಗೆ ಯಾವುದೇ ರಾಜಕೀಯ ಪಕ್ಷಗಳು ಸಂಘಟನೆಗಳು ಮೂಲಭೂತ ಸೌಕರ್ಯವನ್ನು ಮಾಡಿಲ್ಲ. ಮಾತೆತ್ತಿದರೆ ದೇಶ, ಸೈನಿಕರು ಎಂದು ಉದ್ದುದ್ದ ಭಾಷಣ ಬಿಗಿಯುವವರೂ ಎಲ್ಲವನ್ನೂ ನೋಡಿಯೋ ನೋಡದೆಯೋ ಸುಮ್ಮನಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನಿರ್ವಹಣೆ, ಸ್ಥಿರಾಸ್ತಿ ಮತ್ತು ಚರಾಸ್ತಿಯ ಪರಿಶೀಲನೆಯ ಸಂದರ್ಭದಲ್ಲಿ ಉಪಸ್ಥಿತಿಯಿರಲು ದೇವಸ್ಥಾನ ಮಹಾಸಂಘಕ್ಕೂ ಅವಕಾಶ ನೀಡಬೇಕು : ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ, ಕರ್ನಾಟಕ ಆಗ್ರಹ -Vishwanews24

ಮೈದಾನದ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದೇವೆ ಊಟದ ವ್ಯವಸ್ಥೆ ಸಾಂಗವಾಗಿ ನಡೆಯುತ್ತಿದೆ ಮೂರು ಕಡೆ ವಸತಿ ವ್ಯವಸ್ಥೆ ಮಾಡಿದ್ದೇವೆ. ನಿಗದಿಯಾದ ದಿನಕ್ಕಿಂತ ಮೊದಲೇ ಯುವಕರು ಬರುತ್ತಿರುವುದರಿಂದ ಈ ಸಮಸ್ಯೆ ಆಗಿರಬಹುದು ಎಂದು ಜಿಲ್ಲಾಡಳಿತ ಹೇಳಿದೆ.

ಧಾರ್ಮಿಕ, ಸಾರ್ವಜನಿಕ, ರಾಜಕೀಯ ಕಾರ್ಯಕ್ರಮಗಳನ್ನು ಉಡುಪಿಯಲ್ಲಿ ವ್ಯವಸ್ಥಿತವಾಗಿ ನಡೆಸಲಾಗುತ್ತದೆ. ಆದರೆ ಭವಿಷ್ಯದ ಸೈನಿಕರ ವಿಚಾರದಲ್ಲಿ ಸ್ವಯಂಪ್ರೇರಿತವಾಗಿಯೂ ಜನ ಮುಂದೆ ಬಂದಿಲ್ಲ. ಜಿಲ್ಲಾಡಳಿತ ಕರ್ತವ್ಯದ ರೀತಿಯಲ್ಲಿ ಕೆಲಸ ಮಾಡಿ ಕೈತೊಳೆದುಕೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು? : ಸಿದ್ದರಾಮಯ್ಯ -Vishwanews24

ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿರುವ ಚರ್ಚೆಗೆ ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್, ಇದು ಸೈನ್ಯದವರು ಯವರು ಸಂಘಟಿಸಿದ ಸೇನಾ ಆಯ್ಕೆ ಕ್ಯಾಂಪ್. ಇದಕ್ಕೆ ಜಿಲ್ಲಾಡಳಿತ ಸಹಕಾರ ನೀಡಿದೆ ಸುಮಾರು 6ಕಡೆ ಉಳಿಯುವ ವ್ಯವಸ್ಥೆ ಕೂಡ ಮಾಡಿದೆ. ಯಾವುದೇ ಜಿಲ್ಲೆಯಲ್ಲಿ ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಿಲ್ಲ ಆದರೆ ಮಾನವೀಯತೆಯ ನೆಲೆಯಲ್ಲಿ ನಾವು ಅದನ್ನು ಮಾಡಿದ್ದೇವೆ. ಆದರೆ ಕೆಲವರು ಮಧ್ಯ ರಾತ್ರಿ ಬಂದು ಎಲ್ಲೆಂದರೆ ಅಲ್ಲಿ ಮಲಗಿ ಬೆಳಗ್ಗೆ 4 ಗಂಟೆಗೆ ಕ್ರೀಡಾಂಗಣಕ್ಕೆ ಹೋಗುತಿದ್ದಾರೆ ಜಿಲ್ಲಾಡಳಿತ ಊಟ ತಿಂಡಿ ಕುಡಿಯುವ ನೀರು ಮತ್ತು ಉಳಿಯುವ ವ್ಯವಸ್ಥೆ ಸರ್ಕಾರದ ಒಂದು ರೂಪಾಯಿ ಖರ್ಚಿಲ್ಲದೆ ದಾನಿಗಳ ಸಹಕಾರದಿಂದ ಮಾಡಿದೆ ಸುಮ್ಮನೆ ಕೆಲವರು ಅಪಪ್ರಚಾರ ಮಾಡುತಿದ್ದಾರೆ ಇದು ಸರಿ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಉಡುಪಿ : ಮಾರ್ಚ್‌ 22 ರಿಂದ 28 ರವರೆಗೆ ಸುಮನಸಾ ಕೊಡವೂರು ನಾಟಕೋತ್ಸವ “ರಂಗಹಬ್ಬ-9″ -Vishwanews24

Vishwa News 24

Recent Posts

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

4 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

19 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago