Featured

ಉಡುಪಿ : ಸೇವಾ ಮನೋಭಾವದಿಂದ ಗೋಶಾಲೆ ನಿರ್ವಹಣೆ ಮಾಡಬೇಕು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

  1. ಉಡುಪಿ : ಸೇವಾ ಮನೋಭಾವದಿಂದ ಗೋಶಾಲೆ ನಿರ್ವಹಣೆ ಮಾಡಬೇಕು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ, : ಗೋಶಾಲೆಗಳಲ್ಲಿನ ಗೋವುಗಳ ಪಾಲನೆಯನ್ನು ಸೇವಾ ಮನೋಭಾವದಿಂದ ಯಾವುದೇ ಪ್ರತಿಫಲಗಳನ್ನು ಬಯಸದೇ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದರು.

ಅವರು ಸೋಮವಾರ ತಮ್ಮ ಕಛೇರಿಯಲ್ಲಿ ನಡೆದ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಸರಕಾರ ಜಾನುವಾರು ಹತ್ಯ ಪ್ರತಿಬಂಧಕ ಕಾಯ್ದೆ ಹಾಗೂ ಸಂರಕ್ಷಣೆ ಕಾನೂನು ಜಾರಿಗೆ ತಂದಿದೆ. ಗೋರಕ್ಷಣೆಗಾಗಿ ಸರಕಾರ ಜಿಲ್ಲೆಗೊಂದರAತೆ ಗೋಶಾಲೆ ಆರಂಭಿಸಲು ಮುಂದಾಗಿದ್ದು ಪ್ರತಿ ಜಿಲ್ಲೆಗೆ ಮೊದಲನೇ ಹಂತದಲ್ಲಿ ೨೪ ಲಕ್ಷ ರೂಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಅನೇಕ ದಾನಿಗಳು ಇದ್ದಾರೆ, ಅವರ ಸಹಕಾರ ಹಾಗೂ ಜನರ ಸಹಭಾಗಿತ್ವದೊಂದಿಗೆ ಗೋಶಾಲೆಗಳನ್ನು ನಿರ್ವಹಣೆ ಮಾಡಬೇಕು ಎಂದ ಅವರು ಸರಕಾರ ಪಶುಗಳ ನಿರ್ವಹಣೆಗೆ ದಿನಕ್ಕೆ ೧೭.೫೦ ರೂಗಳನ್ನು ನೀಡಲು ನಿಗದಿಪಡಿಸಿದೆ. ಆದರೆ ಪಶುಗಳ ನಿರ್ವಹಣೆಗೆ ಇದು ಸಾಕಾಗುವುದಿಲ್ಲ ಹೆಚ್ಚಿನ ಅನುದಾನ ಬೇಕು ಎಂಬ ಬಗ್ಗೆ ಸಂಘ ಸಂಸ್ಥೆಗಳಿAದ ಕೇಳಿಬರುತ್ತಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ೨,೫೨,೭೨೪ ಗೋವುಗಳಿದ್ದು ಅವುಗಳಲ್ಲಿ ಶೇ. ೦.೭೫ ರಷ್ಟು ಜಾನುವಾರುಗಳಿಗೆ ಅಂದರೆ ೨,೦೦೦ ರಷ್ಟು ಜಾನುವಾರುಗಳಿಗೆ ಸ್ಥಳಾವಕಾಶ ಇರುವಂತೆ ಗೋಶಾಲೆಗಳನ್ನು ಜಿಲ್ಲೆಯಲ್ಲಿ ತೆರೆಯಬೇಕು ಎಂದ ಅವರು ಗೋಶಾಲೆಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿಗಳನ್ನು ಅಳವಡಿಸಿ ದೈನಂದಿನ ಚಟುವಟಿಕೆಗಳನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಅಕ್ಟೋಬರ್ ೨ ರಿಂದ ಅಪ್‌ಲೋಡ್ ಮಾಡಬೇಕು ಎಂದರು.

ಗೋಶಾಲೆಗಳಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಕರುಗಳು ಸೇರಿದಂತೆ ಉಪ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಗೋಶಾಲೆಗಳ ಸುಸ್ಥಿರ ನಿರ್ವಹಣೆ ಹಾಗೂ ಸಂಪನ್ಮೂಲ ಕ್ರೂಢಿಕರಣ ಮಾಡಬೇಕು, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಜಾನುವಾರುಗಳನ್ನು ನೋಡಿಕೊಳ್ಳಲು ಮುಂದೆ ಬಂದರೆ ಅದಕ್ಕೂ ಅವಕಾಶ ಕಲ್ಪಿಸಿ ಗೋಶಾಲೆಗಳಲ್ಲಿ ದಾಖಲಾಗಿರುವ ಜಾನುವಾರುಗಳು ಮರಣ ಹೊಂದಿದಲ್ಲಿ ಸ್ಥಳಿಯ ಪಶು ವೈದ್ಯಾಧಿರಿಯಿಂದ ಪ್ರಮಾಣ ಪತ್ರಪಡೆದು ದಾಖಲೆ ಇಡಬೇಕು ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಈಗಾಗಲೆ ೧೨ ಖಾಸಗಿ ಗೋಶಾಲೆಗಳು ದಯಾಪೂರಕವಾಗಿ ಗೋವುಗಳ ಸಂರಕ್ಷಣೆ ಕಾರ್ಯವನ್ನು ನಿರ್ವಹಿಸುತ್ತಿವೆ. ಅವುಗಳಲ್ಲಿ ನೀಲಾವರದ ಗೋವರ್ಧನಗಿರಿ ಟ್ರಸ್ಟ್, ಶಿರೂರಿನ ಅಮೃತಧಾರ ಗೋಶಾಲೆ ಹಾಗೂ ಕಾರ್ಕಳದ ವೆಂಕಟರಮಣ ಗೋಶಾಲೆಗಳಲ್ಲಿ ೧೦೦ ಕ್ಕೂ ಹೆಚ್ಚು ಜಾನುವಾರುಗಳನ್ನು ಕಳೆದ ೫ ವರ್ಷದಿಂದ ನಿರ್ವಹಣೆ ಮಾಡುತ್ತಿದೆ ಎಂದರು.

ಹೆದ್ದಾರಿಯ ಅಕ್ಕ-ಪಕ್ಕದಲ್ಲಿ ಹಾಗೂ ಖಾಲಿ ನಿವೇಶನದಲ್ಲಿ ಬೆಳೆದಿರುವ ಹುಲ್ಲನ್ನು ಸಂಗ್ರಹಿಸಿ ಗೋಶಾಲೆಗಳಿಗೆ ತಲುಪಿಸುವ ಕಾರ್ಯವನ್ನು ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪಟ್ಟಣ ಪಂಚಾಯತ್‌ಗಳು ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಕಾಡು ಪ್ರಾಣಿಗಳಿಂದ ಜಾನುವಾರುಗಳನ್ನು ರಕ್ಷಣೆ ಮಾಡಲು ಆಯ್ದ ಹಾವಳಿ ಇರುವ ಸ್ಥಳಗಳನ್ನು ಗುರುತಿಸಿ ಸೋಲಾರ್ ದೀಪಗಳನ್ನು ಗ್ರಾ. ಪಂ ಗಳು ಹಾಗೂ ಅರಣ್ಯ ಇಲಾಖೆಗಳು ಅಳವಡಿಸುವುದರಿಂದ ಹಾವಳಿ ತಪ್ಪಿಸಬಹುದು ಎಂದ ಅವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕಾರ್ಕಳದ ಅಭಿನಂದನ ಗೋಶಾಲೆಯ ಕೆ. ಮಾದೇವ, ಕುಂದಾಪುರ ತಾಲೂಕಿನ ಶಿರೂರಿನ ನಂದಗೋಕುಲ ಚಾರಿಟೇಬಲ್ ಟ್ರಸ್ಟ್ನ ಸುರೇಶ ಅವಭೃತ, ನೀಲಾವರ ಗೋಶಾಲೆಯ ಟ್ರಸ್ಟಿ ಹಾಗೂ ಪಶು ಪಾಲನಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಡಾ. ಸರ್ವೋತ್ತಮ ಉಡುಪ, ಕುಮಾರ್ ಕಾಂಚನ್, ಗೋಶಾಲೆಗಳ ನಿರ್ವಹಣೆಯ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಚಂದ್ರ, ಜಿ.ಪಂ ಉಪಕಾರ್ಯದರ್ಶಿ ಕಿರಣ್ ಪಡ್ನೇಕರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ಪ್ರಾಣಿದಯಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ. ದೀನಾನಾಥ ವಸಂತ್ ಬಿಜೂರ, ಸುಧೀರ್ ಕಾಂಚನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

20 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

20 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

21 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

21 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

21 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

21 hours ago