ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ರಘುಪತಿ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಪ್ರಮುಖ ಕಾಮಗಾರಿಗೆ ಕೈಗೊಳ್ಳುವ ಬೇಡಿಕೆಯನ್ನು ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಹಾಗೂ ಕರ್ನಾಟಕ ಟೂರಿಸಂ ವಿಷನ್ ಗ್ರೂಫಿನ ಶಿಫಾರಸ್ಸುಗಳಲ್ಲಿ ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ನಿರ್ಮಿಸುವ ಫೆರ್ರಿ ಜಟ್ಟಿ ನಿರ್ಮಿಸುವ ಕಾಮಗಾರಿಯನ್ನು ಪ್ರವಾಸೋದ್ಯಮ ಇಲಾಖೆಯ ಮೇಲುಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲು ಯೋಜಿಸಲಾಗಿತ್ತು. ಆದರೆ ಸಿ.ಆರ್.ಝಡ್. ನಿಯಮಾವಳಿ ಅನ್ವಯ ಫೆರ್ರಿ ಜಟ್ಟಿ ನಿರ್ಮಿಸಲು ಅಸಾಧ್ಯವಾಗಿರುವುದರಿಂದ ಉಡುಪಿ ಜಿಲ್ಲಾಧಿಕಾರಿಯವರು ಫೆರ್ರಿ ಜಟ್ಟಿ ಬದಲು ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ಬಗ್ಗೆ ಅಭಿಪ್ರಾಯ ಹಾಗೂ ಅನುಷ್ಠಾನಕ್ಕೆ ಸಲ್ಲಿಸಿದ ವರದಿ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಸಲ್ಲಿಸಿದ ಅಂದಾಜು ಪಟ್ಟಿಯಂತೆ ಪ್ರವಾಸೋದ್ಯಮ ಇಲಾಖೆಯು ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ 5.50 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…