Featured

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ; ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ – Vishwanews24

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ..

ಪ್ರವಾಸಿಗರ‌ ಮೇಲೆ ನಿರ್ವಹಣಾ ಸಿಬ್ಬಂದಿ ದರ್ಪ

ಉಡುಪಿ: ಉಡುಪಿ ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರವಾಸಿಗರ‌ ಮೇಲೆ ಸೈಂಟ್ ಮೇರಿಸ್‌ ದ್ವೀಪದ ನಿರ್ವಹಣಾ ಸಿಬ್ಬಂದಿ ದರ್ಪ ತೋರಿಸಿದ ಘಟನೆ ನಡೆದಿದೆ.

ದ್ವೀಪದೊಳಗಡೆ ಕ್ಯಾಮರಾ ನಿಷೇಧವಿದ್ದರೂ, ಶುಲ್ಕ ಪಾವತಿಸಿ ಲಗೇಜ್ ರೂಂನಲ್ಲಿ ಕ್ಯಾಮರಾ ಇಡಬಹುದು. ಆದರೆ ಇಲ್ಲಿ ಸುರಕ್ಷಿತವಾಗಿ ಕ್ಯಾಮರಾ ಇಡಲು ಯಾವುದೇ ವ್ಯವಸ್ಥೆ ಇಲ್ಲ. ಬಾಗಿಲೇ ಇಲ್ಲದ ರೂಂನಲ್ಲಿ ಲಕ್ಷಾಂತರ ಮೌಲ್ಯದ ಕ್ಯಾಮರಾ ಹೇಗೆ ಇಡುವುದು ಎಂದು ಪ್ರವಾಸಿಗನೊಬ್ಬ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಕ್ಯಾಮರಾ ತೆಗೆದು ಬಿಸಾಡುತ್ತೇನೆ ಎಂಬುದಾಗಿ ದ್ವೀಪದ ನಿರ್ವಹಣಾ ಸಿಬಂದಿ ದರ್ಪದಿಂದ ಉತ್ತರಿಸಿದ್ದಾರೆ.

ಪ್ರವಾಸಿಗರನ್ನು ಸಿಬಂದಿಯು ಏಕವಚನದಲ್ಲೇ ಮಾತನಾಡಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

ಇನ್ನು ಸೀ ವಾಕ್‌ನಲ್ಲಿ ಕ್ಯಾಮರಾ ಪ್ರವೇಶಕ್ಕೆ ಹಣ ಪಾವತಿ ಮಾಡಿದ್ದರೂ, ಸೈಂಟ್ ಮೇರೀಸ್‌ನಲ್ಲಿ ಕ್ಯಾಮರಾಕ್ಕೆ ಅವಕಾಶ ಇಲ್ಲ. ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಬೋಟ್‌ನಲ್ಲಿ ದುಬಾರಿ ದರ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವ್ಯವಸ್ಥೆ ಆಗರವಾದರೂ ಉಡುಪಿ ಜಿಲ್ಲಾಡಳಿತ ಮೌನವಾಗಿದೆ ಎಂದು ಆಪಾದಿಸಿದ್ದಾರೆ. ಸೈಂಟ್ ಮೇರಿಸ್ ದ್ವೀಪದ ನಿರ್ವಹಣೆ ಜವಾಬ್ದಾರಿಯನ್ನು ಮಲ್ಪೆ ಅಭಿವೃದ್ಧಿ ಸಮಿತಿ ಹೊತ್ತಿದೆ. ಪ್ರವಾಸಿಗ ಹಾಗೂ ಸಿಬ್ಬಂದಿ ನಡುವಿನ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

19 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

21 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

21 hours ago