ಉಡುಪಿ: ಪೂರ್ವ ಮುಂಗಾರು ಮಳೆ ಕರಾವಳಿಯಲ್ಲಿ ಅಬ್ಬರ ತೋರುತ್ತಿದೆ. ಅರಬ್ಬಿ ಸಮುದ್ರದ ಅಬ್ಬರ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದೆ.
ಮುಂದಿನ 4 ತಿಂಗಳು ಯಾವುದೇ ಬೋಟುಗಳು, ದೋಣಿಗಳು ಸೇಂಟ್ ಮೇರಿಸ್ ದ್ವೀಪಕ್ಕೆ ಹೋಗಲ್ಲ. ಬೇಸಿಗೆ ರಜೆ ಬಂದ್ರೆ ಸಾಕು ರಾಜ್ಯದ ಮೂಲೆ ಮೂಲೆಯಿಂದ ಜನ ಉಡುಪಿಗೆ ಪ್ರವಾಸಕ್ಕೆ ಬರುತ್ತಾರೆ. ಆದರೆ ಸಮುದ್ರದ ಅಲೆಗಳ ಜೊತೆಗೆ ಆಟವಾಡುವ ದ್ವೀಪದ ವಿಹಾರ ಮಾಡುವ ಆಸೆಗಳನ್ನು ಹೊತ್ತು ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.
ದ್ವೀಪಕ್ಕೆ ಅಪ್ಪಳಿಸುತ್ತವೆ ಬೃಹತ್ ಗಾತ್ರದ ಅಲೆಗಳು: ಸೇಂಟ್ ಮೇರಿಸ್ ದ್ವೀಪ ವಿಭಿನ್ನ ಆಕಾರದ ಬಂಡೆಗಳಿಗೆ ಫೇಮಸ್. ಬಂಡೆಗಳ ಜೊತೆ ಫೋಟೋಶೂಟ್ ಮಾಡಲೆಂದೇ ಸಾವಿರಾರು ಪ್ರವಾಸಿಗರು ಪ್ರತಿನಿತ್ಯ ಉಡುಪಿಗೆ ಬಂದು ದ್ವೀಪದ ಕಡೆ ಯಾನ ಮಾಡುತ್ತಾರೆ. ಮಳೆಗಾಲದಲ್ಲಿ ಪಾಚಿ ಕಟ್ಟಿದ ಬಂಡೆಗಳು ಅಪಾಯಕಾರಿ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸವನ್ನು ನಿರ್ಬಂಧ ಮಾಡಲಾಗುತ್ತದೆ. ಸಮುದ್ರದ ಅಬ್ಬರ ಅಲೆಗಳ ಹೊಡೆತ ಹೆಚ್ಚಾಗಿರುವ ಕಾರಣ ಪ್ರವಾಸಿ ಬೋಟ್ ಗಳು ಸಮುದ್ರಕ್ಕೆ ಇಳಿಯುವುದು ಅಪಾಯಕಾರಿಯಾಗಿದೆ.
ದ್ವೀಪದಲ್ಲಿ ವಿವಿಧ ಬಗೆಯ ಮನರಂಜನಾ ಕ್ರೀಡೆಗಳನ್ನು ಕೂಡ ನಿಷೇಧ ಮಾಡಲಾಗಿದೆ. ಸೇಂಟ್‍ಮೇರಿಸ್ ಪಿಕ್ ಪಾಯಿಂಟ್‍ನಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಸ್ತಬ್ಧ ಆಗಿದೆ. ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಕರಾವಳಿ ಪ್ರವಾಸಕ್ಕೆ ಬರುವವರು ತೀರದಿಂದಲೇ ಸಮುದ್ರ ನೋಡಿ ವಾಪಸ್ಸಾಗುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…