Featured

ಉಡುಪಿ : ಸೈನಿಕರ ತ್ಯಾಗದಿಂದ ದೇಶದ ಅಖಂಡ ಬೆಳವಣಿಗೆ : ಸಚಿವ ಸುನೀಲ್ ಕುಮಾರ್ -Vishwanews24

ಉಡುಪಿ : ಸೈನಿಕರ ತ್ಯಾಗದಿಂದ ದೇಶದ ಅಖಂಡ ಬೆಳವಣಿಗೆ : ಸಚಿವ ಸುನೀಲ್ ಕುಮಾರ್ -Vishwanews24

ಉಡುಪಿ : ಅಖಂಡ ಭಾರತದ ರಕ್ಷಣೆಯ ಹೊಣೆಗಾರಿಕೆಯನ್ನು ಹೊತ್ತಿರುವ ನಮ್ಮ ದೇಶದ ಸೈನಿಕರ ತ್ಯಾಗ, ಉತ್ಸಾಹ, ಪ್ರಮಾಣಿಕತೆ ಎಲ್ಲಾ ಭಾರತೀಯರಿಗೆ ಮಾದರಿಯಾಗಿದ್ದು, ಸೈನಿಕರ ಇಂತಹ ಕರ‍್ಯ ಚಟುವಟಿಕೆಗಳಿಂದ ಭಾರತ ಇಂದು ಅಖಂಡವಾಗಿ ಬೆಳೆದಿದೆ ಎಂದು ಇಂಧನ ಮತ್ತು ಕನ್ನಡ  ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಇಂದು ಅಜ್ಜರಕಾಡು ನ ಹುತಾತ್ಮ ಸೈನಿಕರ ಯುದದ ಸ್ಮಾರಕ ಬಳಿ, ಹುತಾತ್ಮರಿಗೆ ಗೌರವ ಸಮರ್ಪಣೆ ನೆರವೇರಿಸಿ ಮಾತನಾಡಿದರು.

ಅಮೃತ ಮಹೋತ್ಸವ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಕರೆಯಂತೆ , ನವ ಭಾರತ ಸಂಕಲ್ಪ ನಿರ್ಮಾಣದಡಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಿದೆ ಎಂದ ಅವರು, ನಿವೃತ್ತ ಸೈನಿಕರ ಬೇಡಿಕೆಗಳ ಕುರಿತ ಮನವಿಯನ್ನು ಜಿಲ್ಲಾಡಳಿತವು ಗಂಭೀರವಾಗಿ ತೆಗೆದುಕೊಂಡು ತಕ್ಷಣದಲ್ಲಿ ಅದಕ್ಕೆ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.

ನಂತರ ಹುತಾತ್ಮ ಸ್ಮಾರಕ ಆವರಣದಲ್ಲಿ ಸಚಿವರು ಗಿಡಗಳನ್ನು ನೆಟ್ಟರು.

ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್,ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿ ನಿಖಿಲ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲೆಯ ನಿವೃತ್ತ ಯೋಧರು ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 minutes ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

41 minutes ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 hour ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 hours ago