Featured

ಉಡುಪಿ : ಕೆಎಂಸಿ ಮಣಿಪಾಲದಲ್ಲಿ ಸೋಮವಾರದಿಂದ ಸಾರ್ವಜನಿಕರಿಗೆ ಎಲ್ಲ ಸೇವೆಗಳು ಮುಕ್ತ -Vishwanews24

ಉಡುಪಿ : ಸೋಮವಾರದಿಂದ ಸಾರ್ವಜನಿಕರಿಗೆ ಕೆಎಂಸಿ ಮಣಿಪಾಲದಲ್ಲಿ ಎಲ್ಲ ಸೇವೆಗಳು ಮುಕ್ತ -Vishwanews24

ಉಡುಪಿ : “ಜೂನ್‌ 21ರಿಂದ ಜಾರಿಗೆ ಬರುವಂತೆ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು, ಒಳರೋಗಿ ಸೇವೆಗಳು, ನಾನ್-ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲಾ ವಿಭಾಗಗಳು ಸಾರ್ವಜನಿಕರಿಗೆ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಬೆಳಗ್ಗೆ 8.00 ರಿಂದ ಸಂಜೆ 5.00 ರವರೆಗೆ ಲಭ್ಯವಾಗಲಿದೆ” ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.

“ಎಲ್ಲ ರೀತಿಯ ಶಸ್ತ್ರ ಚಿಕಿತ್ಸಾ ಸೌಲಭ್ಯ ಕೂಡ ದೊರೆಯಲಿದೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್ -19 ಪರೀಕ್ಷೆ ಕಡ್ಡಾಯವಾಗಿದೆ. ಒಂದು ವೇಳೆ ತಮ್ಮ ಊರಿನಲ್ಲಿಯೇ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳವರೆಗೆ ಮಾತ್ರ ಇರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಗೊಳಿಸುವ ಮೊದಲು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಲಾಗುವುದು” ಎಂದಿದ್ದಾರೆ.

“ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು, ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago