ಉಡುಪಿ : ಸೋಮವಾರದಿಂದ ಸಾರ್ವಜನಿಕರಿಗೆ ಕೆಎಂಸಿ ಮಣಿಪಾಲದಲ್ಲಿ ಎಲ್ಲ ಸೇವೆಗಳು ಮುಕ್ತ -Vishwanews24
ಉಡುಪಿ : “ಜೂನ್ 21ರಿಂದ ಜಾರಿಗೆ ಬರುವಂತೆ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು, ಒಳರೋಗಿ ಸೇವೆಗಳು, ನಾನ್-ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲಾ ವಿಭಾಗಗಳು ಸಾರ್ವಜನಿಕರಿಗೆ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಬೆಳಗ್ಗೆ 8.00 ರಿಂದ ಸಂಜೆ 5.00 ರವರೆಗೆ ಲಭ್ಯವಾಗಲಿದೆ” ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
“ಎಲ್ಲ ರೀತಿಯ ಶಸ್ತ್ರ ಚಿಕಿತ್ಸಾ ಸೌಲಭ್ಯ ಕೂಡ ದೊರೆಯಲಿದೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್ -19 ಪರೀಕ್ಷೆ ಕಡ್ಡಾಯವಾಗಿದೆ. ಒಂದು ವೇಳೆ ತಮ್ಮ ಊರಿನಲ್ಲಿಯೇ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳವರೆಗೆ ಮಾತ್ರ ಇರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಗೊಳಿಸುವ ಮೊದಲು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಲಾಗುವುದು” ಎಂದಿದ್ದಾರೆ.
“ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು, ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು” ಎಂದು ತಿಳಿಸಿದ್ದಾರೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…