Featured

ಉಡುಪಿ : ಸೋಲಿನ ಖಾತರಿಯಿಂದ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆ  : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಉಡುಪಿ : ಸೋಲಿನ ಖಾತರಿಯಿಂದ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆ  : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ಜನತೆಯ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸೋಲಿನ ಖಾತರಿಯಿಂದ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

‘ಗರೀಭೀ ಹಠಾವೋ’ ಎಂಬ ಪೊಳ್ಳು ಘೋಷಣೆಯೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶ ಲೂಟಿಗೈದ ಕಾಂಗ್ರೆಸ್ಸಿನ ಸ್ವತಃ ಪರಮೋಚ್ಚ ನಾಯಕರು ಭ್ರಷ್ಟಾಚಾರ ಹಗರಣಗಳಲ್ಲಿ ತನಿಖೆ ಎದುರಿಸುತ್ತಾ ಬೇಲ್ ಮೇಲೆ ಹೊರಗಿರುವುದು ಕಾಂಗ್ರೆಸ್ಸಿನ ನೈತಿಕತೆಗೆ ಒಡ್ಡಿರುವ ಜ್ವಲಂತ ಸವಾಲಾಗಿದೆ.

ಅನ್ನಭಾಗ್ಯ ಕೇಂದ್ರ ಸರಕಾರದ ಯೋಜನೆಯಾಗಿದೆ. ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರಕಾರ ಪ್ರತೀ ಕೆ.ಜಿ. ಅಕ್ಕಿಗೆ ರೂ.29ರಂತೆ ವೆಚ್ಚ ಭರಿಸಿ ರಾಜ್ಯಕ್ಕೆ ನೀಡುತ್ತಿದ್ದು, ರಾಜ್ಯದ ಪಾಲು ಕೇವಲ ರೂ.3 ಮಾತ್ರ. ಕೇಂದ್ರದ ಯೋಜನೆಯನ್ನು ತನ್ನದೆಂದು ಬಿಂಬಿಸಿ, ಕಾಂಗ್ರೆಸ್ ಕೇವಲ ಸುಳ್ಳು ಭರವಸೆ ನೀಡುತ್ತಿದೆ.

ಈಗಾಗಲೇ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಎಸ್.ಸಿ., ಎಸ್.ಟಿ. ಸಮುದಾಯಗಳಿಗೆ ಸರಾಸರಿ ಬಳಕೆಯಾಗುವ 75 ಯುನಿಟ್ ಉಚಿತ ವಿದ್ಯುತ್ ನೀಡುತ್ತಿದ್ದು, ವಿದ್ಯುತ್ ಸರಬರಾಜು ಆತ್ಯುತ್ತಮ ಸ್ಥಿತಿಯಲ್ಲಿದೆ. ಆದರೆ ತನ್ನ ಆಡಳಿತಾವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಮೇಣದ ಬತ್ತಿ ಉರಿಸಿ, ಟಾರ್ಚ್ ಬೆಳಕಿನಲ್ಲಿ ಬಜೆಟ್ ಮಂಡಿಸಿರುವುದನ್ನು ಮರೆತ ಕಾಂಗ್ರೆಸ್ ಉಚಿತ ವಿದ್ಯುತ್ ಎಂದು ಬೊಗಳೆ ಬಿಟ್ಟಿರುವುದು ಸುಳ್ಳು ಗ್ಯಾರಂಟಿ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ಸಿನ ಇನ್ನಿತರ ಸುಳ್ಳು ಗ್ಯಾರಂಟಿಗಳನ್ನು ಊಹಿಸಲೂ ಅಸಾಧ್ಯ ಎಂಬುದನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎಂದರೆ ಕಾಂಗ್ರೆಸ್ ಆಡಳಿತದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದು ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಯ ದಾರಿ ತಪ್ಪಿಸುವ, ರಾಜ್ಯವನ್ನು ಸಾಲದ ಶೂಲಕ್ಕೇರಿಸುವ ಕಾಂಗ್ರೆಸ್ಸಿನ ಸುಳ್ಳು ಭರವಸೆಗಳ ಪೊಳ್ಳು ಗ್ಯಾರಂಟಿ ಕಾರ್ಡ್ ಎಂಬ ಪ್ರಹಸನಕ್ಕೆ ಮತದಾರರು ಮನ್ನಣೆ ನೀಡಲಾರರು. ಕಾಂಗ್ರೆಸ್ಸಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಮಾತ್ರ ನೈಜ ಗ್ಯಾರಂಟಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

1 hour ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

3 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

3 hours ago