Featured

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಉಡುಪಿ: ಸೌದಿಯಲ್ಲಿ ಬಂಧಿತರಾಗಿದ್ದ ಹರೀಶ್ ಬಂಗೇರಾ ಮರಳಿ ತಾಯ್ನಾಡಿಗೆ -Vishwanews24

ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪ..

ಉಡುಪಿ: ಫೇಸ್‌ಬುಕ್‌ನಲ್ಲಿ ಮೆಕ್ಕಾ ಹಾಗೂ ಸೌದಿ ದೊರೆಯ ಬಗ್ಗೆ ಅವಹೇಳನಕಾರಿಯಾಗಿ ಬರಹ ಪ್ರಕಟಿಸಿದ ಆರೋಪದಡಿಯಲ್ಲಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಇಲ್ಲಿನ ಕೋಟೇಶ್ವರ ನಿವಾಸಿ ಹರೀಶ್ ಬಂಗೇರ ಒಂದು ವರ್ಷ ಏಳು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿ ಆಗಸ್ಟ್ 18 ರಂದು ಹರೀಶ್ ಬಂಗೇರರವರು ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಹರೀಶ್ ಬಂಗೇರರವರು ತಾಯ್ನಾಡಿಗೆ ಮರಳಲು ಪೂರೈಸಬೇಕಾಗಿದ್ದ ವಿಧಿ- ವಿಧಾನಗಳೆಲ್ಲವೂ ಪೂರ್ಣಗೊಂಡಿದ್ದು ಇದೇ ಆಗಸ್ಟ್ 17ರಂದು ಸೌದಿ ಅರೇಬಿಯಾದ ದಮಾಮ್ ವಿಮಾನ ನಿಲ್ದಾಣದಿಂದ ದೋಹಾ ಹೊರಟು ದೋಹಾ ಮೂಲಕ ಆಗಸ್ಟ್ 18 ರಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪರಿದ್ದಾರೆ ಎಂದು ಸೌದಿ ಅರೇಬಿಯಾ ದ ರಿಯಾದ್ ನಲ್ಲಿರುವ ಭಾರತೀಯ ದೂತವಾಸದಿಂದ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಕೋಟೇಶ್ವರದ ಗೋಪಾಡಿ ಗ್ರಾಮದ ಹರೀಶ್‌ ಬಂಗೇರ ಅವರ ಹೆಸರಲ್ಲಿ ಫೇಸ್‌ ಬುಕ್‌ನಲ್ಲಿ ನಕಲಿ ಖಾತೆ ತೆರೆದು, ಸೌದಿ ಅರೇಬಿಯಾ ದೊರೆ ವಿರುದ್ಧ ಫೋಸ್ಟ್‌ ಮಾಡಲಾಗಿತ್ತು. ಈ ಪೋಸ್ಟ್‌ ಮಾಡಿದವರು ಬಂಗೇರ ಎಂದೇ ಭಾವಿಸಿದ್ದ ಸೌದಿ ಪೊಲೀಸರು ಬಂಗೇರ ಅವರನ್ನು ಬಂಧಿಸಿ ಜೈಲಿನಲ್ಲಿ ಇರಿಸಿದ್ದರು. ಈ ವೇಳೆ ಬಂಗೇರ ಪತ್ನಿ ಸುಮನ ಮಾಧ್ಯಮಗಳಿಗೆ‌ ಮಾಹಿತಿ‌ ನೀಡಿ ತನ್ನ ಪತಿಯನ್ನು ಷಡ್ಯಂತ್ರ ಮಾಡಿ ಈ‌ ಪ್ರಕರಣದಲ್ಲಿ‌ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದರಲ್ಲದೆ ನಿರಪರಾಧಿಯಾದ ಪತಿಯ ಬಿಡುಗಡೆಗೆ ಸಹಕರಿಸುವಂತೆ ಕಣ್ಣೀರಿಟ್ಟಿದ್ದರು.

ಹರೀಶ್ ಬಂಗೇರ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆಗೆದು ಅನಗತ್ಯ ಫೋಸ್ಟ್ ಮಾಡಿರುವ ಕುರಿತು ತನಿಖೆ ನಡೆಸುವಂತೆ ಅವರ ಪತ್ನಿ ನೀಡಿರುವ ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಅಪರಾಧ ವಿಭಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದರೆಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆಯಲ್ಲಿ ಹರೀಶ್ ಬಂಗೇರ ಅವರ ನಕಲಿ ಖಾತೆ ತೆರೆದಿರುವ ಹಾಗೂ ಈ ಖಾತೆಗೂ ಬಂಗೇರ ಅವರಿಗೂ ಸಂಬಂಧ ಇಲ್ಲದೆ ಇರುವ ಅಂಶಗಳು ಬೆಳಕಿಗೆ ಬಂದಿತ್ತು. ತನಿಖೆಯಲ್ಲಿ ಕಂಡು ಬಂದಿದ್ದ ಅಂಶಗಳನ್ನು ರಾಯಭಾರಿ ಕಚೇರಿ ಮೂಲಕ ಸೌದಿ ಅರೇಬಿಯಾ ಸರ್ಕಾರಕ್ಕೂ ತಲುಪಿಸಲಾಗಿತ್ತು. ಈ ತನಿಖಾ ಅಂಶಗಳೇ ಬಂಗೇರ ಅವರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎನ್ನಲಾಗುತ್ತಿದೆ.

ಈ ಪ್ರಕರಣದ ಕುರಿತು ಅವರ ಕುಟುಂಬ ಸ್ನೇಹಿತ ಲೋಕೇಶ್ ಅಂಕದಕಟ್ಟೆ ಸಮಾನಮನಸ್ಕರೊಂದಿಗೆ ಬಿಡುಗಡೆಯ ಬಗ್ಗೆ ನಿರಂತರ ಪ್ರಯತ್ನವನ್ನು ಸಂಘಟಿಸಿದ್ದರು. ಸಾಮಾಜಿಕ ಕಾರ್ಯಕರ್ತ ಡಾ. ರವೀಂದ್ರ‌ನಾಥ್ ಶ್ಯಾನುಭಾಗ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ‌ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಶಾಸಕ ಹಾಲಾಡಿ‌ ಶ್ರೀನಿವಾಸ್‌ ಶೆಟ್ಟಿ‌ , ಹಿರಿಯ ಪೊಲೀಸ್ ಅಧಿಕಾರಿ ಕಮಲಪಂತ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹರೀಶ್ ಬಂಗೇರ ಬಿಡುಗಡೆಯ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

10 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

18 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago