ಉಡುಪಿ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ವಿವಾದ ವಿಚಾರವಾಗಿ ಮಾತನಾಡಿದ ಶಾಸಕ ರಘುಪತಿ ಭಟ್ ,ಇದರ ಹಿಂದೆ ಕ್ಯಾಂಪಸ್ ಫ್ರಂಟ್ , ಎಎಸ್ ಯುಐ ಯಂತಹ ಸಂಘಟನೆಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದ್ದಾರೆ.
ಈಗಾಗಲೇ ಈ ಸಂಬಂಧ ಮುಸ್ಲಿಂ ಮುಖಂಡರ ಜೊತೆಗೆ ಎರಡು ಬಾರಿ ಮಾತುಕತೆ ನಡೆದಿದೆ. ಖಾಜಿಯವರು,ಮದ್ರಸಾ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದಾರೆ. ಉಡುಪಿ ಜಿಲ್ಲೆಯ ಮುಖಂಡರಿಗೆ ಈ ವಿಚಾರ ಮನವರಿಕೆ ಮಾಡಲಾಗಿದೆ ಎಂದರು.
ಯಾವುದೇ ಸರ್ಕಾರಿ ಶಾಲೆಯಲ್ಲಿ ಹಿಜಾಬ್ ಧರಿಸಿ ಪಾಠ ಹೇಳುವುದಕ್ಕೆ ಅವಕಾಶ ಇಲ್ಲ ಎಂದ ಶಾಸಕರು, ಆರು ಮಕ್ಕಳಿಗೆ ಹಿಜಾಬ್ ಧರಿಸುವುದಕ್ಕೆ ಅವಕಾಶ ನೀಡಲು ಆಗುತ್ತಾ? ಆಗ ಉಳಿದ ಧರ್ಮದವರು ಕೇಸರಿ ಶಾಲಿಗೆ ಅವಕಾಶ ಕೇಳುತ್ತಾರೆ. ಶಾಲೆ ಶಿಕ್ಷಣ ಕೇಂದ್ರವಾಗದೆ ಧಾರ್ಮಿಕ ಸಂಘರ್ಷದ ಕೇಂದ್ರ ವಾಗುತ್ತದೆ.ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.ಸರ್ಕಾರ ಅವಕಾಶ ಕೊಟ್ಟರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದ್ದಾರೆ.
ಅವರಿಗೆ ಅನ್ ಲೈನ್ ಕ್ಲಾಸ್ ಗೆ ಶಾಲಾ ಆಡಳಿತ ಮಂಡಳಿ ಅವಕಾಶ ನೀಡಿದೆ ಎಂದ ಶಾಸಕರು, ಡಿಸೆಂಬರ್ 30 ಕಾಪುವಿನಲ್ಲಿ ಎಸ್ ಡಿ ಪಿ ಐ ಮೂರು ಸ್ಥಾನ ಗೆದ್ದಿದೆ. ಅದಾಗಿ ,ಡಿ. 31 ಕ್ಕೆ ಮಕ್ಕಳು ಹಿಜಾಬ್ ಧರಿಸುವುದಕ್ಕೆ ಅವಕಾಶ ಕೇಳಿದ್ದಾರೆ.ಅಲ್ಲಿಯವರೆಗೆ ಮಕ್ಕಳಿಗೆ ಯಾವುದೇ ಸಮಸ್ಯೆ ಇರಲಿಲ್ಲ. ಇದರ ಹಿಂದೆ ಕೆಲವು ಸಂಘ ಟನೆಗಳ ಷಡ್ಯಂತ್ರ ಇದೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…