ಉಡುಪಿ, : ರಾ.ಹೆ 66 ರಲ್ಲಿ ಬಲಾಯಿಪಾದೆ ಜಂಕ್ಷನ್ ಬಳಿ ಸ್ಕೂಟರ್‌ಗೆ 407 ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಾಲಕ ಆಂಡ್ರೋ ಮಥಾಯಿಸ್ ಹಾಗೂ ಹಿಂಬದಿ ಕುಳಿತಿದ್ದ ಅವರ ಪತ್ನಿ ವಿಲ್ಮಾ ಮಥಾಯಿಸ್ ಗೆ ಗಂಭೀರ ಗಾಯಗಳಾಗಿವೆ.
ನವೆಂಬರ್ 4 ರಂದು ಬೆಳಗ್ಗೆ 11:15 ಕ್ಕೆ ಆಂಡ್ರೋ ಮಥಾಯಿಸ್ ಹಾಗೂ ಅವರ ಪತ್ನಿ ವಿಲ್ಮಾ ಮಥಾಯಿಸ್ ಉಡುಪಿಯಿಂದ ಶಂಕರಪುರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಶಂಕರಪುರ ಕಡೆಯಿಂದ ಬಲಾಯಿಪಾದೆ ಜಂಕ್ಷನ್ ಕಡೆಗೆ ಬರುತ್ತಿದ್ದ 407 ಟೆಂಪೋ ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಎದುರು ಗಡೆ ಬರುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಕೂಟರ್ ಸವಾರ ಹಾಗೂ ಹಿಂಬದಿ ಕುಳಿತಿದ್ದ ಅವರ ಪತ್ನಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುತ್ತಾರೆ. ಗಾಯಳುಗಳು ಹೈಟೆಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಂಡ್ರೋ ಮಥಾಯಿಸ್ ಸಹೋದರ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಭಾರತೀಯ ವಾಯು ಪಡೆಯಿಂದ ಅಗ್ನಿವೀರ್ ವಾಯುಗೆ ಅರ್ಜಿ ಆಹ್ವಾನ – Vishwanews24
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …