ಉಡುಪಿ: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾ ಟೌನ್‌ಶಿಪ್ ಬಳಿ ಬಂಧಿಸಿದ್ದಾರೆ.
ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಬಂಧಿತ ಆರೋಪಿ. ಈತನಿಂದ ಒಟ್ಟು 3,04,610ರೂ. ಮೌಲ್ಯದ 2 ಕೆ.ಜಿ 344 ಗ್ರಾಂ ಗಾಂಜಾ, ಸ್ಕೂಟರ್, 5810 ರೂ. ನಗದು, ಮೊಬೈಲ್ ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಉಪನಿರೀಕ್ಷಕ ಪವನ್ ನಾಯಕ್, ಸಿಬ್ಬಂದಿ ಪ್ರವೀಣ್ ಕುಮಾರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್ ರಾಜ್ ಅವರನ್ನೊಳಗೊಂಡ ತಂಡವು ಈ ಕಾರ್ಯಾಚರಣೆ ನಡೆಸಿದೆ.
ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…