ಉಡುಪಿ : ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಸಮೀಪ ಚೇಂಪಿಯ ವಿಶ್ವಕರ್ಮ ಸಭಾ ಭವನ ಬಳಿ ಸಂಭವಿಸಿದೆ.
ಮೃತಪಟ್ಟ ಸ್ಕೂಟರ್ ಸವಾರ ಗುಂಡ್ಮಿ ಅನಂತ ಹೆಗ್ಡೆ(40) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹಸವಾರ ಚೇಂಪಿ ದೇವಸ್ಥಾನದ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವಿಶ್ವನಾಥ್ ನಾಯಕ್ ಅವರನ್ನು ಬ್ರಹ್ಮಾವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ವಿವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಅದೇ ದಾರಿಯಲ್ಲಿ ವಿರುದ್ದ ದಿಕ್ಕಿನಿಂದ ಸಾಲಿಗ್ರಾಮದಿಂದ ಗುಂಡ್ಮಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ನೇರ ಮುಖಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಅನಂತ ಹೆಗ್ಡೆ ರಸ್ತೆಗೆ ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಟೋಲ್ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕೋಟ ಠಾಣಾ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…