ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ನಿವೃತ್ತ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.
ಎಂಐಟಿ ಸಂಸ್ಥೆಯ ನಿವೃತ್ತ ಉದ್ಯೋಗಿ ಉಮಾನಂದ ಕೆ.ವಿ. ಅವರು ಈ ವಂಚನೆಗೆ ಒಳಗಾದವರು. ವಂಚಕನೊಬ್ಬ ವಾಟ್ಸಾಪ್ ಮೂಲಕ ಉಮಾನಂದ ಅವರನ್ನು ಸಂಪರ್ಕಿಸಿ, ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿದ್ದಾನೆ. ವಂಚಕರ ಮಾತುಗಳನ್ನು ನಂಬಿದ ಉಮಾನಂದ ಅವರು, ಕಳೆದ ನವೆಂಬರ್ 6 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 30,32,000 ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ಆದರೆ, ಆರೋಪಿಗಳು ಹೂಡಿಕೆ ಮಾಡಿದ ಹಣವನ್ನು ಅಥವಾ ಯಾವುದೇ ಲಾಭಾಂಶವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…