ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭಗೊಂಡಿದ್ದು, ನಗರದ ಆಟೋ ಚಾಲಕರು ನಿಟ್ಟುಸಿರು ಬಿಡುವಂತಾಗಿದೆ. ಬುಧವಾರದಿಂದಲೇ ಚಾಲಕರು ಗ್ಯಾಸ್ ತುಂಬಿಸಲು ಎಲ್‌ಪಿಜಿ ಪಂಪ್‌ಗಳ ಮುಂದೆ ಸಾಲುಗಟ್ಟಿ ನಿಂತಿರುವುದು ಕಂಡುಬಂದವು.
ಬುಧವಾರ ಸುಮಾರು 7,000 ಲೀಟರ್ ಗ್ಯಾಸ್ ಪೂರೈಕೆಯಾಗಿದ್ದು, ದೀರ್ಘಕಾಲದ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಚಾಲಕರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಬೇಡಿಕೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಪೂರೈಕೆಯಾಗುವ ನಿರೀಕ್ಷೆಯಿದೆ.
ಕಳೆದ ಕೆಲವು ವಾರಗಳಿಂದ ಪೂರೈಕೆ ಸ್ಥಗಿತಗೊಂಡಿದ್ದರಿಂದ, ಅನಿವಾರ್ಯವಾಗಿ ಅನೇಕ ಆಟೋ ಚಾಲಕರು ಪೆಟ್ರೋಲ್ ಬಳಸಿ ವಾಹನ ಚಲಾಯಿಸಲು ಆರಂಭಿಸಿದ್ದರು. ಇದು ಇಂಧನ ವೆಚ್ಚವನ್ನು ಹೆಚ್ಚಿಸಿ, ಅವರ ದಿನನಿತ್ಯದ ಆದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಇನ್ನು ಕೆಲವು ಚಾಲಕರು ಆಟೋ ಓಡಿಸುವುದನ್ನೇ ಬಿಟ್ಟು ದಿನಕೂಲಿ ಕೆಲಸಕ್ಕೂ ಹೋಗಿದ್ದರು.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಆಮದಿನ ಮೇಲೆ ಪರಿಣಾಮ ಬೀರಿದ್ದು, ಉಡುಪಿ ಸೇರಿದಂತೆ ಹಲವು ನಗರಗಳಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿತ್ತು.
ಗ್ಯಾಸ್ ಪೂರೈಕೆ ಪುನಾರಂಭಗೊಂಡಿರುವುದು ಚಾಲಕರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಆದರೆ, ಮುಂದಿನ ದಿನಗಳಲ್ಲಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಇಂತಹ ಸಮಸ್ಯೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಚಾಲಕರು ಮನವಿ ಮಾಡಿದ್ದಾರೆ.
ಗ್ಯಾಸ್ ತುಂಬಿಸಲು ಆಟೋ ರಿಕ್ಷಾಗಳು ರಸ್ತೆ ಬದಿಯಲ್ಲಿ ದೀರ್ಘ ಸಾಲಿನಲ್ಲಿ ನಿಂತಿರುವುದರಿಂದ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…