ಉಡುಪಿ: ಸ್ವಂತ ಮನೆ ಇಲ್ಲ ಎಂಬ ಕಾರಣಕ್ಕೆ ನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಣಿಪಾಲದ ಫ್ಲ್ಯಾಟ್‌ವೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದ ಕೊಡಗು ಮೂಲದ ಗೌರಿ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಫೆ.13ರ ಸಂಜೆ ಸುಮಾರು 4 ಗಂಟೆಗೆ ತಾವು ಕೆಲಸ ಮಾಡುವ ಮನೆಯಿಂದ ಹೋಗಿ ಫೆ.14ರಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದಿದ್ದರು.
ಮೃತರ ನಾಲ್ಕು ಮಕ್ಕಳಲ್ಲಿ ಮೊದಲನೇ ಮಗ ಮತ್ತು ಎರಡನೇ ಮಗಳು ರಾಜಮ್ಮ ಹಾಗೂ ಅವರ ಗಂಡ ಈಗಾಗಲೇ ಮರಣ ಹೊಂದಿದ್ದು, ಮೃತರಿಗೆ ಯಾವುದೇ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಫೆ. 14ರಂದು ಅವರು ಕೆಲಸ ಮಾಡುವ ಮನೆಯ ಮೇಲಿನ ಟೇರಸ್‌ನ ಕಬ್ಬಣದ ಕೊಂಡಿಗೆ ನೈಲನ್ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…