ಉಡುಪಿ, : ಸ್ವಚ್ಛತಾ ಕಾರ್ಮಿಕರೊಬ್ಬರ ಮೇಲೆ ಇಬ್ಬರು ಯುವತಿಯರು ಸೇರಿದಂತೆ ಮೂವರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿಯ ಅಂಬಲಪಾಡಿಯಲ್ಲಿ ನಡೆದಿದೆ.
ಅಂಬಲಪಾಡಿಯ ಅಪಾರ್ಟ್‌ಮೆಂಟ್ ಬಳಿ ಈ ಘಟನೆ ನಡೆದಿದೆ.
ಸ್ವಚ್ಛತಾ ಕಾರ್ಯಕರ್ತ ಸುರೇಶ್ ಅವರು ನೀಡಿದ ದೂರಿನ ಪ್ರಕಾರ, “ಸುರೇಶ್ ಅವರು ಉಡುಪಿ ನಗರಸಭೆಯ ವ್ಯಾಪ್ತಿಯ ಸ್ವಚ್ಛತಾ ಕೆಲಸ ಮಾಡುತ್ತಿದ್ದು, ಎಪ್ರಿಲ್ 22ರಂದು ಅಂಬಲಪಾಡಿಯ ಅಪಾರ್ಟ್ಮೆಂಟ್‌ವೊಂದರ ಬಳಿ ಕಸ ವಿಲೇವಾರಿ ವಾಹನದ ಮೂಲಕ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ( ಇಬ್ಬರು ಯುವತಿಯರು ಹಾಗೂ ಓರ್ವ ಯುವಕ) ಕಸ ವಿಲೇವಾರಿ ವಾಹನವನ್ನು ತಡೆದು ನಿಲ್ಲಿಸಿ ಸುರೇಶ್ ಅವರ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುರೇಶ್ ಅವರ ದೂರಿನ ಆಧಾರದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…