Featured

ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ – vishwanews24

ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ

       ಉಡುಪಿ: ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಆಪಾಯವಾಗುತ್ತದೆ, ಜೊತೆಗೆ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ.

    ಆದ್ದರಿಂದ ಮಾನ್ಯ ಉಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ಜಿಲ್ಲೆಯ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ.

     ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವ್ಯಾಪಾರ ಲೈಸ್ಸನ್ ನೀಡಬಾರದು ಮತ್ತು ಲೈಸನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು.

    ಸದರಿ ಅಧಿಸೂಚನೆಯ ಅನ್ವಯ ಪ್ಲಾಸ್ಟರ್ ಪ್ಯಾರಿಸ್, ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ ಹಾಗೂ ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ನಿಯಾಮನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.

   ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜನೆ ಮಾಡಬೇಕು.

    ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿಕಸವನ್ನು ಪ್ರತ್ಯೇಕಿಸಿ, ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

     ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಲಾಗಿರುತ್ತದೆ.

     ಈ ಅಧಿಸೂಚನೆಯನ್ನು ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹೊರಡಿಸಲಾಗಿದ್ದು, ಸ್ವರ್ಣಗೌರಿ ಹಾಗೂ ಗಣೇಶ ಚರ್ತುಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. 

 

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

6 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

6 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

9 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago