Featured

ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ – vishwanews24

ಉಡುಪಿ: ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಸೂಚನೆ

       ಉಡುಪಿ: ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ..ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ ಆಪಾಯವಾಗುತ್ತದೆ, ಜೊತೆಗೆ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ದಕ್ಕೆ ಉಂಟಾಗುತ್ತದೆ.

    ಆದ್ದರಿಂದ ಮಾನ್ಯ ಉಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯಂತೆ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಆಚರಣೆಯಿಂದ ಉಂಟಾಗುವ ಮಾಲಿನ್ಯದಿಂದ ನೈಸರ್ಗಿಕ ಜಲ ಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಗೌರಿ ಮತ್ತು ಗಣೇಶ ವಿಗ್ರಹಗಳನ್ನು ಇನ್ನು ಮುಂದೆ ಜಿಲ್ಲೆಯ ಯಾವುದೇ ಕೆರೆ, ಬಾವಿ, ಕಟ್ಟೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ.

     ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವ್ಯಾಪಾರ ಲೈಸ್ಸನ್ ನೀಡಬಾರದು ಮತ್ತು ಲೈಸನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ/ ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ತಕ್ಷಣ ಜರುಗಿಸಲಾಗುವುದು.

    ಸದರಿ ಅಧಿಸೂಚನೆಯ ಅನ್ವಯ ಪ್ಲಾಸ್ಟರ್ ಪ್ಯಾರಿಸ್, ಬಣ್ಣ ಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ ಹಾಗೂ ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ನಿಯಾಮನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು.

   ಗೌರಿ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಿದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜನೆ ಮಾಡಬೇಕು.

    ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿಕಸವನ್ನು ಪ್ರತ್ಯೇಕಿಸಿ, ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸಬೇಕು.

     ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧಿಲಾಗಿರುತ್ತದೆ.

      ಅಧಿಸೂಚನೆಯನ್ನು ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹೊರಡಿಸಲಾಗಿದ್ದು, ಸ್ವರ್ಣಗೌರಿ ಹಾಗೂ ಗಣೇಶ ಚರ್ತುಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯ ನಾಗರಿಕರು ಸಹಕರಿಸಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago