ಉಡುಪಿ : ಸ್ವರ್ಣಾ ನದಿಯ ಮರಳು ಲೂಟಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ವಿರುದ್ಧವೇ ಲೋಕಾಯುಕ್ತಕ್ಕೆ ಯುವ ಕಾಂಗ್ರೆಸ್ ದೂರು ಹಿನ್ನೆಲೆಯಲ್ಲಿ ಉಡುಪಿ ಡಿ.ಸಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಲಾಕ್ ಡೌನ್ ಸಮಯದಲ್ಲಿ ಕೊರೋನಾಕ್ಕೆ ಸಂಬಂಧಿಸಿದ ಕೆಲಸಗಳು ಸಾಕಷ್ಟಿದ್ದವು.ಹೀಗಾಗಿ ಜಿಲ್ಲಾಧಿಕಾರಿ ಹೋಗಿ ಮರಳು ಕಾಯಲು ಆಗುವುದಿಲ್ಲ.ಯಾರ ಜವಾಬ್ದಾರಿ ಏನು ಎಂಬುದನ್ನು ಸ್ಪಷ್ಟವಾಗಿ ನಿರ್ದೇಶನ ನೀಡಿದ್ದೇನೆ.
ಕರ್ತವ್ಯ ಲೋಪ ಮಾಡಿದವರ ವಿರುದ್ಧ ಕ್ರಮ ಜರುಗಿಸಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಯುವ ಕಾಂಗ್ರೆಸ್ ಆರೋಪ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತದೆ
ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ.ಈಗಾಗಲೇ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿದ್ದೇವೆ.ಐದು ವಾಹನ ಸೀಝ್ ಮಾಡಿ ,ಅಕ್ರಮ ಮರಳನ್ನೂ ವಶಕ್ಕೆ ಪಡೆದಿದ್ದೇವೆ.ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗಣಿ, ಭೂವಿಜ್ನಾನ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತಕ್ಕೆ ಶಿಫಾರಸು ಮಾಡಿದ್ದೇವೆ.ನಿನ್ನೆ ಮತ್ತೆ ಮರಳು ದಾಸ್ತಾನು ಕಳ್ಳತನ ಮಾಡಲಾಗಿದ್ದು ದೂರು ದಾಖಲಿಸಿಕೊಂಡಿದ್ದೇವೆ ಎಂದು ಉಡುಪಿ ಡಿ.ಸಿ.ಜಿ.ಜಗಧೀಶ್ ಹೇಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…