Featured

ಉಡುಪಿ : ಸ್ವಾತಂತ್ರದ ಅಮೃತ ಮಹೋತ್ಸವ : ಕಾರಂತ ಥೀಂ ಪಾರ್ಕ್  ನಲ್ಲಿ ಕಾರ್ಯಕ್ರಮ : ಸಚಿವ ಸುನೀಲ್ ಕುಮಾರ್ -Vishwanews24

ಉಡುಪಿ : ಸ್ವಾತಂತ್ರದ ಅಮೃತ ಮಹೋತ್ಸವ : ಕಾರಂತ ಥೀಂ ಪಾರ್ಕ್  ನಲ್ಲಿ ಕಾರ್ಯಕ್ರಮ : ಸಚಿವ ಸುನೀಲ್ ಕುಮಾರ್ -Vishwanews24

ಉಡುಪಿ, : ರಾಜ್ಯದಲ್ಲಿ ಸ್ವಾತಂತ್ರದ ಅಮೃತ ಮಹೋತ್ರವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದಕ್ಕಾಗಿ ಕಾರ್ಯಕ್ರಮಗಳ ಪಟ್ಟಿ ರೂಪಿಸುತ್ತಿದ್ದು, ಇದರಲ್ಲಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ನಲ್ಲಿ ಸಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಕೋಟದಲ್ಲಿನ ಶಿವರಾಮ ಕಾರಂತ ಥೀಂ ಪಾರ್ಕ್ ಗೆ ಭೇಟಿ ನೀಡಿ,ಶಿವರಾಮ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಶಿವರಾಮ ಕಾರಂತರದ್ದು ಚಲನಶೀಲ ವ್ಯಕ್ತಿತ್ವ, ಸಾಹಿತ್ಯದ ಎಲ್ಲಾ ಕ್ಷೇತ್ರಗಳಲ್ಲಿ ಅವರು ನಾಡಿಗೆ ನೀಡಿರುವ ಕೊಡುಗೆ ಅಪಾರವಾದುದು ಅವರ ವ್ಯಕ್ತಿತ್ವ, ಚಿಂತನೆ,ಜೀವನ ಚೆರಿತ್ರೆ ಮುಂದಿನ ಪೀಳಿಗೆಗೆ ಸಾರುವ ಉದ್ದೇಶದಿಂದ ನಿರ್ಮಾಣಗೊಂಡಿರುವ, ಥೀಂ ಪಾರ್ಕ್ ನ ಅಭಿವೃದ್ದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ,ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಕಾರಂತ ಥೀಂ ಪಾರ್ಕ್ ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago