ಉಡುಪಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಗಾರವನ್ನು ಮಣಿಪಾಲದಲ್ಲಿ ಉದ್ಘಾಟಿಸಿ ಮಾತನಾಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಸ್ವಉದ್ಯೋಗ ಆರಂಭಿಸಿ ಗ್ರಾಮೀಣ ಭಾಗದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಜೊತೆಗೆ, ಇತರರಿಗೂ ಈ ಬಗ್ಗೆ ಮಾಹಿತಿ ನೀಡಿ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ನಾಗರಾಜ ವಿ.ನಾಯಕ, ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗರಾಜ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ಮೆನೇಜರ್ ಮನೋಜ್ ಕುಮಾರ್, ಉದ್ಯಮಿ ವೆಂಕಟೇಶ್ ಶೇಟ್ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…