Featured

ಉಡುಪಿ : ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ದೇಶಕ್ಕೆ ಮಾದರಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ : ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ದೇಶಕ್ಕೆ ಮಾದರಿ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಉಡುಪಿ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಅವರು ಇಂದು ಉಡುಪಿ ತಾಲೂಕು ಪಂಚಾಯತ್ ಆವರಣದಲ್ಲಿರುವ ಸಂಜೀವಿನಿ ಮಾರಾಟ ಮಳಿಗೆಯಲ್ಲಿ, ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ವಿವಿಧ ವಿನ್ಯಾಸದ ಮಣ್ಣಿನ ಹಣತೆ, ದೀಪಾವಳಿ ಗಿಫ್ಟ್ ಪ್ಯಾಕ್ ಹಾಗೂ ಉಡುಪಿ ಸಂಜೀವಿನಿ ಕಜೆ ಅಕ್ಕಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸಂಜೀವಿನಿ ಸಂಘದ ಸದಸ್ಯರ ಹಡಿಲು ಗದ್ದೆ ಕೃಷಿಯು ಜನರಲ್ಲಿ ಕೃಷಿಯ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಭತ್ತದ ಬೆಳೆಯ ಜೊತೆಗೆ ತರಕಾರಿ ಬೆಳೆಯುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನವನ್ನು ಸದ್ಭಳಕೆ ಮಾಡಿಕೊಳ್ಳುವು ದರೊಂದಿಗೆ ವರ್ಷದ 12 ತಿಂಗಳೂ ಗದ್ದೆಗಳಲ್ಲಿ ಕೆಲಸ ಮಾಡುವಂತಾಗಬೇಕು. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳ ಮಾರ್ಗದರ್ಶನ ಅತೀ ಅಗತ್ಯ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಸಂಜೀವಿನಿ ಸ್ವ-ಸಹಾಯ ಸಂಘದ ತಯಾರಿಸಿದ ದೀಪಾವಳಿ ಗಿಫ್ಟ್ ಪ್ಯಾಕ್‌ಗಳನ್ನು ಗ್ರಾಹಕರು ಖರೀದಿಸುವಂತೆ ತಿಳಿಸಿದ ಅವರು, ಹಡಿಲು ಗದ್ದೆಯಲ್ಲಿ ಬೆಳೆದಿರುವ ಕಜೆ ಅಕ್ಕಿಯು ಸಾವಯವ ವಿಧಾನದಲ್ಲಿ ಬೆಳೆಯುವುದರಿಂದ ಆರೋಗ್ಯಕ್ಕೆ ಉತ್ತಮವಾಗಿದ್ದು, ಇದನ್ನು ಸಾರ್ವಜನಿಕರು ಬಳಸುವುದರೊಂದಿಗೆ ಅವರುಗಳಿಗೆ ನೆರವಾಗಿರಬೇಕು. ಸಂಜೀವಿನಿ ಸಂಘದ ಸದಸ್ಯರು ಸ್ವ-ಸಾಮಥ್ಯದ ಮೂಲಕ ರಾಜ್ಯದ ಇತರೆ ಹೆಣ್ಣುಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಮಾತನಾಡಿ, ಗ್ರಾಮೀಣ ಮಹಿಳೆಯರು ತಯಾರಿಸುವ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಿಸುವ ಸಲುವಾಗಿ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಯ ಬೇಡಿಕೆ ಇರುವುದರಿಂದ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳನ್ನು ತಯಾರಿಸಿದ್ದು, ಅವುಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಅವರುಗಳಿಗೆ ಪ್ರೋತ್ಸಾಹ ನೀಡಬೇಕು. ಇದರಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದಿರುವುದರಿಂದ ಇದರ ಲಾಭವನ್ನು ನೇರವಾಗಿ ಸಂಜೀವಿನಿ ಸದಸ್ಯರು ಪಡೆಯಲಿದ್ದಾರೆ ಎಂದರು.

ಜಿ. ಪಂ. ಮುಖ್ಯ ಯೋಜನಾಕಾರಿ ಶ್ರೀನಿವಾಸ ರಾವ್, ಜಿ.ಪಂ. ಯೋಜನಾ ನಿರ್ದೇಶಕ ಪ್ರಶಾಂತ್ ರಾವ್, ಕೃಷಿ ಇಲಾಖೆಯ ಚಂದ್ರಶೇಖರ್, ಉಡುಪಿ ತಾ.ಪಂ. ಕಾರ್ಯನಿರ್ವಹಣಾಕಾರಿ ವಿಜಯಾ, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

12 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

12 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

14 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

15 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

15 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

15 hours ago