ಉಡುಪಿ: ಹಲವಾರು ವಿರೋಧ ವಿವಾದಗಳಿಗೆ ಕಾರಣವಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮೇಳನ ಮುಂದೂಡಿಕೆ -Vishwanews24

ಉಡುಪಿ: ಹಲವಾರು ವಿರೋಧ ವಿವಾದಗಳಿಗೆ ಕಾರಣವಾಗಿದ್ದ, ಜ 11ರಂದು ನಡೆಯಬೇಕಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮ್ಮೇಳನ ಧಿಡೀರ್ ಎಂದು ಮುಂದೂಡಲಾಗಿದೆ ಈ ಬಗ್ಗೆ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಪ್ರಕಟನೆ ಹೊರಡಿಸಿದ್ದಾರೆ.

“ಬಿಲ್ಲವ ಮುಸ್ಲಿಂ ಸ್ನೇಹ ಸಮಾವೇಶದ ಬಗ್ಗೆ ಗೊಂದಲ ಸೃಷ್ಟಿಸುವ ಪ್ರಯತ್ನದಲ್ಲಿದ್ದು, ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಸಮಾಜ ಮತ್ತು ಸಮುದಾಯದ ಒಳಿತನ್ನು ಬಲಿಕೊಟ್ಟು ಕೀಳುಮಟ್ಟದ ಕುತಂತ್ರಗಳನ್ನು ನಡೆಸುತ್ತಿದ್ದಾರೆ. ಅನಗತ್ಯವಾಗಿ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿ ಸುಳ್ಳು ಸುದ್ದಿ ಹರಿಯಬಿಡಲಾಗುತ್ತಿದೆ. ಸಮಾವೇಶದ ಅತಿಥಿ ಮತ್ತು ಸ್ವಾಗತ ಸಮಿತಿಯ ಸದಸ್ಯರ ಬಗ್ಗೆ ಕೀಳುಮಟ್ಟದ ಅಸಹನೀಯ ಭಾಷೆ ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ. ಈ ನಡುವೆ ಉದ್ಘಾಟಕರಾಗಿ ಬರಬೇಕಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇಂತಹ ಗೊಂದಲ ಪರಿಸ್ಥಿತಿಯಲ್ಲಿ ಜ.11ರಂದು ನಡೆಯಬೇಕಾಗಿದ್ದ ಬಿಲ್ಲವ ಮುಸ್ಲಿಂ ಸ್ನೇಹ ಸಮಾವೇಶ ನಡೆಸುವುದು ಸೂಕ್ತವಲ್ಲ ಎಂದು ಸ್ವಾಗತ ಸಮಿತಿ ನಿರ್ಣಯ ತೆಗೆದುಕೊಂಡಿದೆ. ಶೀಘ್ರವೇ ಹೊಸ ಸಮಿತಿ ರಚಿಸಿ ಸಮಾವೇಶದ ದಿನಾಂಕ ನಿರ್ಧಾರಿಸಲಾಗುವುದು.

ಇನ್ನು ಈ ಸಮಾವೇಶವನ್ನು ಉದ್ಘಾಟಿಸಲಿದ್ದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ನೀಡಿದ ಅಮಂತ್ರಣದ ಅಸಮರ್ಪಕತೆಯ ಬಗ್ಗೆ ವದಂತಿಗಳನ್ನು ಹರಡಲಾಗಿದೆ. ಇದು ಶುದ್ಧ ಸುಳ್ಳು. ಅವರನ್ನು ಕನಿಷ್ಠ ಮೂರು ಬಾರಿ ಸಂಪರ್ಕಿಸಿ. ಒಪ್ಪಿಗೆ ಪಡೆದು. ಅನಂತರ ಕೆಲವೇ ಕೆಲವು ಆಮಂತ್ರಣ ಪತ್ರಿಕೆಯ ಪ್ರತಿಗಳನ್ನು ಮುದ್ರಿಸಿ ನಿಯೋಗವೊ೦ದರ ಮೂಲಕ ಅವರನ್ನು ಭೇಟಿ ಮಾಡಿ ವಿದ್ಯುಕ್ತವಾಗಿ ಆಮಂತ್ರಿಸಲಾಗಿತ್ತು. ಅದನ್ನು ಅವರು ಸಂತೋಷದಿಂದ ಒಪ್ಪಿಕೊಂಡ ಬಳಿಕ ಮರುದಿನ ಜನರನ್ನು ಆಮಂತ್ರಿಸಲಿಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಮಂತ್ರಣ ಪತ್ರಿಕೆ ಮುದ್ರಿಸಿ, ಪ್ರತಿನಿಧಿಗಳ ಮೂಲಕ ವಿತರಿಸಲಾಯಿತು. ಆವರಿಗೆ ಮಾಹಿತಿ ನೀಡದೆ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ದಾಖಲಿಸಲಾಗಿದೆ ಎಂದು ಹೇಳಿರುವುದು ಸತ್ಯವಲ್ಲ. ಆಮಂತ್ರಣ ನೀಡಲು ಹೋದ ನಿಯೋಗದಲ್ಲಿ ಶ್ರೀ ಬಿ.ಎನ್‌. ಶಂಕರ ಪೂಜಾರಿ, ಶ್ರೀ ಜನಾರ್ದನ ತೋನ್ತೆ, ಶ್ರೀ ರಾಮ ಪೂಜಾರಿ ಶ್ರೀ ಇದ್ರಿಸ್‌ ಹೂಡೆ, ಶ್ರೀ ಎಂ.ಎ. ಮೌಲಾ ಉಡುಪಿ, ಶ್ರೀ ಕರಾಮತ್‌ ಅಲಿ. ಉಡುಪಿ ಮತ್ತು ಶ್ರೀ ಕೋಟಾ ಇಬ್ರಾಹೀಮ್‌ ಸಾಹೇಬ್‌ ಒಳಗೊಂಡಿದ್ದರು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago