ಉಡುಪಿ: ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ , ಹಲಾಲ್ ಅಂಗಡಿಯನ್ನ ಬಂದ್ ಮಾಡಿ ಎಂದು ಹಿಂದುಗಳು ಒತ್ತಾಯ ಮಾಡಿಲ್ಲಎಂದು ಶಾಸಕ ರಘುಪತಿ ಭಟ್ ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಅವರು ಗುರುವಾರ ಉಡುಪಿಯಲ್ಲಿ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ತಡೆ ವಿಚಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಸಲ್ಮಾನ ಸಮಾಜ ಸ್ವಲ್ಪ ಸುಧಾರಣೆಯನ್ನು ಹೊಂದಬೇಕಾಗಿದ್ದು, ನಾವು ಭಾರತ ದೇಶದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದ್ದೇವೆ ಎಂದು ಅರಿತುಕೊಳ್ಳಬೇಕಾಗುತ್ತದೆ.
ಮುಸಲ್ಮಾನರು ಧರ್ಮಾಚರಣೆ ಮಾಡುವುದಕ್ಕೆ ಯಾವುದೇ ಆಕ್ಷೇಪಗಳು ಇಲ್ಲ, ಶಿಸ್ತು , ಸಮವಸ್ತ್ರ ಸಮಾನತೆಯನ್ನು ಎಲ್ಲರೂ ಪಾಲಿಸಬೇಕು ಅದರ ಜೊತೆಗೆ ಭಾರತದ ಪ್ರಜೆಯಾಗಿ ಅವರ ಕರ್ತವ್ಯ ಏನು ಎಂದು ಮೊದಲು ತಿಳಿದುಕೊಳ್ಳಬೇಕು. ಹಿಂದೂಧರ್ಮೀಯರು ಯಾವಾಗಲೂ ಸಹಿಷ್ಣುಗಳು ನಮ್ಮದು ವಸುದೈವ ಕುಟುಂಬಕಂ ಎಂದು ಹೇಳಿಕೊಂಡು ಬಂದಿರುವ ನಾವು ಇತ್ತೀಚೆಗೆ ಅತಿರೇಕವಾಗಿ ನಡವಳಿಕೆಗಳು ಕಂಡ ಬಂದಾಗ ಈ ತರದ ಬೆಳವಣಿಗೆಗಳಾಗಿವೆ ಎಂದರು.
ರಾಜ್ಯದಲ್ಲಿ ಹಿಜಾಬ್, ವ್ಯಾಪಾರ, ಹಲಾಲ್, ವಿಚಾರ ಚರ್ಚೆಯಾಗುತ್ತಿದೆ ನಮ್ಮ ಕಾಲೇಜಿನ ಆರು ವಿದ್ಯಾರ್ಥಿಗಳಿಗೆ ಸಾರಿ ಸಾರಿ ಹೇಳಿದರೂ ಅವರು ಕೇಳಲಿಲ್ಲ ಇದರೊಂದಿಗೆ ಹೈಕೊರ್ಟ್ ತೀರ್ಪು ಬಂದ ಬಳಿಕ ಮುಸಲ್ಮಾನ ಸಮಾಜ ನಡೆದುಕೊಂಡ ರೀತಿ, ಬಂದ್ ಕರೆ ಇದಕ್ಕೆ ಕಾರಣವಾಗಿದೆ. ಭಟ್ಕಳದಲ್ಲಿ ಹಿಂದೂಗಳ ಅಂಗಡಿಯನ್ನು ಜಬರ್ದಸ್ತ್ ಯಾಗಿ ಬಂದ್ ಮಾಡಿಸಲಾಯ್ತು ಈ ಎಲ್ಲಾ ಘಟನೆಗಳು ಹಿಂದೂಗಳ ಭಾವನೆಯನ್ನು ಕೆರಳಿಸಿವೆ ಆದ್ದರಿಂದ ಹಿಂದೂ ಗಳು ವ್ಯಾಪಾರ, ಹಲಾಲ್ ಮತ್ತಿತರ ವಿಚಾರವನ್ನು ಚರ್ಚೆಗೆ ತಂದರು.
ರಾಜ್ಯದಲ್ಲಿ ಹಲಾಲ್ ಚಿಕನ್ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ಹಲಾಲ್ ಚಿಕನ್ ಅನ್ನು ಹಿಂದೂಗಳು ಬಾಯ್ಕಾಟ ಮಾಡಿದ್ದು ತಪ್ಪಲ್ಲ ಹಿಂದೂಗಳ ಈ ನಡೆಯಲ್ಲಿ ಯಾವುದೇ ತಪ್ಪಿಲ್ಲ ಆದರೆ ಎಲ್ಲಿಯೂ ಕೂಡ ಹಲಾಲ್ ಅಂಗಡಿಯನ್ನ ಬಂದ್ ಮಾಡಿ ಎಂದು ಹಿಂದುಗಳು ಒತ್ತಾಯ ಮಾಡಿಲ್ಲ. ಹಲಾಲ್ ಮಾಂಸ ತಿನ್ನಬೇಡಿ ಎಂಬ ಕರೆ ಸರಿಯಾಗಿದೆ ಕೋಳಿಯನ್ನು ಕಟ್ ಮಾಡುವ ರೀತಿ, ಅಲ್ಲಾನಿಕೆ ಸಮರ್ಪಣೆ ಮಾಡುವುದು ಇಸ್ಲಾಂ ಪದ್ಧತಿಯಂತೆ ನಡೆಯುತ್ತದೆ ಹಿಂದೂ ಜನಜಾಗೃತಿ ಮಾಡಿಸುವುದು ತಪ್ಪಲ್ಲ ಸರಿಯಾಗಿಯೇ ಇದೆ ಎಂದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…