ಉಡುಪಿ: ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ನಡೆದಿದೆ.
ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ 32 ಕೊಲೆಯಾದ ವ್ಯಕ್ತಿ, ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ, ಕಂಠಪೂರ್ತಿ ಕುಡಿದು ಇಬ್ಬರು ಜಗಳ ಮಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನ ತನಿಖೆಯ ತಿಳಿದುಬರಬೇಕಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…