Featured

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕ ಕಾರವಾರದಲ್ಲಿ ಪತ್ತೆ – vishwanews24

ಉಡುಪಿ: ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಪತ್ತೆ; ತ್ವರಿತ ಕ್ರಮಕ್ಕಾಗಿ ಟಿಟಿಇಗೆ ಗೌರವ

ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಕೋಚ್ S3 ನಲ್ಲಿ ಬಾಲಕ ಒಬ್ಬನೇ ಪ್ರಯಾಣಿಸುತ್ತಿದ್ದಾಗ, ಟಿಕೆಟ್ ತಪಾಸಣೆ ವೇಳೆ ರಾಘವೇಂದ್ರ ಶೆಟ್ಟಿ ಅವರಿಗೆ ಬಾಲಕನ ಪ್ರತಿಕ್ರಿಯೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಆತನ ಬ್ಯಾಗ್ ಪರಿಶೀಲಿಸಿದಾಗ, ಶಾಲೆಯ ಐಡಿ ಕಾರ್ಡ್ ದೊರೆತಿದೆ. ತಕ್ಷಣವೇ ಅವರು ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಿದರು. ಆಗ, ಬಾಲಕ ಹಾಸ್ಟೆಲ್‌ನಿಂದ ಓಡಿಹೋಗಿರುವುದು ದೃಢಪಟ್ಟಿದೆ. ಆತನ ತಾಯಿಗೆ ಮಗ ಸುರಕ್ಷಿತವಾಗಿರುವ ಬಗ್ಗೆ ಮಾಹಿತಿ ನೀಡಲಾಯಿತು. ಆತ ತಾಯಿಯೊಂದಿಗೆ ವಾಸಿಸುತ್ತಿದ್ದು, ಆಕೆ ಮನೆಗೆಲಸ ಮಾಡಿ ಮಗನನ್ನು ಓದಿಸುತ್ತಿದ್ದರು.

ಉಡುಪಿ ನಿಲ್ದಾಣದಲ್ಲಿ ಬಾಲಕನನ್ನು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್)ಗೆ ಹಸ್ತಾಂತರಿಸಲಾಯಿತು. ಪೊಲೀಸರು ಬಾಲಕ ಸುರಕ್ಷಿತವಾಗಿ ಮನೆ ಸೇರುವ ವರೆಗೆ ಆತನನ್ನು ಉಡುಪಿಯ ಮಕ್ಕಳ ಪಾಲನಾ ಕೇಂದ್ರದಲ್ಲಿ ಇರಿಸಿದರು.

ರಾಘವೇಂದ್ರ ಶೆಟ್ಟಿ ಅವರ ಕ್ಷಿಪ್ರ ಮತ್ತು ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಿ, ಕೊಂಕಣ ರೈಲ್ವೆಯ ಸಿಡಿಎಂ ಸಂತೋಷ್ ಕುಮಾರ್ ಝಾ ಅವರು 5,000 ರೂ. ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago