ಉಡುಪಿ: ನನಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು ಎಂದು ನಗರದ ಸರ್ಕಾರಿ ಮಹಿಳಾ ಪಿಯು ಕಾಲೇಜು ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಚಾರವಾಗಿ ಮಾತನಾಡಿದ ಅವರು, ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂಯೇಷನ್ ಎಷ್ಟು ಅಂತ ಗೊತ್ತಿಲ್ಲ. ಒಬ್ಬ ಮನುಷ್ಯನ ಬೆಲೆ ಎಷ್ಟು ಅಂತ ಗೊತ್ತಿದ್ದರೆ ಆತ ಬೆಲೆ ಕಟ್ಟುತ್ತಿರಲಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ ರಾಷ್ಟ್ರೀಯತೆ ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಕಿಡಿಕಾರಿದರು.
ಕಿಡಿಗೇಡಿಗಳು ಅವರ ತಲೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಲ್ಲದೇ, ತಲೆಗೆ 10 ಲಕ್ಷ ರೂಪಾಯಿ ಘೋಷಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದವರು ಷಂಡರು. ತಾಕತ್ ಇದ್ದರೆ ಅವರು ಎದುರು ಬಂದು ಮಾತಾಡಲಿ. ನನ್ನ ಜೀವನದಲ್ಲಿ ಇಂತದ್ದು ತುಂಬಾ ನೋಡಿದ್ದೇನೆ. ನಾನು ದೇಶದ್ರೋಹಿ ಚಟುವಟಿಕೆ ಮಾಡಿಲ್ಲ, ಅನ್ಯಾಯ ಮಾಡಿಲ್ಲ. ನನಗೆ ದೋ ನಂಬರ್ ಬ್ಯುಸಿನೆಸ್ ಇಲ್ಲ ನಾನು ಯಾರದೋ ಅನ್ನದ ಬಟ್ಟಲಿಗೆ ಕೈಹಾಕಿ ತಿಂದಿಲ್ಲ ಎಂದು ಸಿಡಿದರು.
ಶಾಲೆಯ ಶಿಸ್ತು ಮತ್ತು ಕೋರ್ಟ್ ಆದೇಶ ಪಾಲಿಸಲು ನಾವು ಹಿಜಬ್‍ನ ವಿರುದ್ಧವೇ ನಿಲ್ಲುತ್ತೇವೆ. ಈ ವರ್ಷ ಕೂಡ 40ಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ನಾವು ಅಡ್ಮಿಶನ್ ಮಾಡಿಸಿಕೊಂಡಿದ್ದೇವೆ. ನಾವು ಹಿಜಬ್ ತೆಗೆದು ಕ್ಲಾಸಿಗೆ ಬರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಿಡಿಗೇಡಿಗಳು ಪ್ರಮೋದ್ ಮುತಾಲಿಕ್ ಅವರಿಗೂ ಬೆದರಿಕೆ ಹಾಕಿದ್ದಾರೆ. ನಾನು ಅವರ ಜೊತೆ ಮಾತನಾಡಿಲ್ಲ, ಮಾತನಾಡುತ್ತೇನೆ. ನನ್ನ ಸಿದ್ಧಾಂತ ದೇಶದ ವಿಚಾರದ ಹೋರಾಟ ಮಾಡುತ್ತೇನೆ. ನಾನು ಭಯಪಡುವ ಪ್ರಶ್ನೆಯೇ ಇಲ್ಲ. ಟೀಕೆ ಬೆದರಿಕೆ ಸಾಮಾಜಿಕ ಚಟುವಟಿಕೆಯ ಒಂದು ಅವಿಭಾಜ್ಯ ಅಂಗ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…