Featured

ಉಡುಪಿ : ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ – vishwanews24

ಉಡುಪಿ : ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲಿ ಕ್ರೈಸ್ತ ಉಲ್ಲೇಖ ಕೈಬಿಡಿ: ಮುಖ್ಯಮಂತ್ರಿಗೆ ಸಂಸದ ಕೋಟ ಮನವಿ

ಉಡುಪಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಮಾಡುತ್ತಿರುವ ಜಾತಿ ಮತ್ತು ಆರ್ಥಿಕ-ಸಾಮಾಜಿಕ ಸಮೀಕ್ಷೆಯಲ್ಲಿ ಹಿಂದೂ ಧರ್ಮದ ವಿವಿಧ ಜಾತಿ ಗುರುತಿಸುವಿಕೆಯಲ್ಲಿ ಕ್ರಿಶ್ಚನ್ ಪದ ಬಳಕೆಗೆ ಅವಕಾಶ ಕೊಟ್ಟು ಮತಾಂತರಕ್ಕೆ ಕಾಂಗ್ರೆಸ್ ಸರಕಾರ ಬೆಂಬಲ ನೀಡುತ್ತಿರುವುದನ್ನು ಖಂಡಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಇಂದು ಪತ್ರ ಬರೆದಿದ್ದು, ಕೂಡಲೇ ಇದನ್ನು ಸರಿಪಡಿಸುವಂತೆ ಕೋರಿದ್ದಾರೆ.

ಆಯೋಗದ ಮೂಲಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯ ಜೊತೆಗೆ ಜಾತಿಗಣತಿಯೂ ನಡೆಯುತ್ತಿದೆ. ಇದರಲ್ಲಿ ಹಿಂದೂ ಧರ್ಮವೆಂದು ಪರಿಗಣಿಸಲ್ಪಟ್ಟ ಬಹುತೇಕ ಜಾತಿಗಳನ್ನು ಆಯಾಯ ಜಾತಿಗಳೊಂದಿಗೆ ಕ್ರೈಸ್ತರೆಂದು ಗುರುತಿಸಲು ಸರಕಾರ ಅವಕಾಶ ಮಾಡಿದೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ.

ತಮ್ಮ ಆಡಳಿತದಲ್ಲಿ ಲಿಂಗಾಯಿತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಕುರುಬ ಕ್ರೈಸ್ತ, ನೇಕಾರ ಕ್ರೈಸ್ತ, ಮಡಿವಾಳ ಕ್ರೈಸ್ತ, ಬಿಲ್ಲವ ಕ್ರೈಸ್ತ, ಕುಂಬಾರ ಕ್ರೈಸ್ತ, ಬಂಜಾರ ಕ್ರೈಸ್ತ ಎಂದು ಗುರುತಿಸುವ ಹಿಂದಿರುವ ಉದ್ದೇಶ ಇಡೀ ಹಿಂದೂ ಧರ್ಮ ವನ್ನು ವಿವಿಧ ಜಾತಿಗಳನ್ನು ಉಲ್ಲೇಖಿಸಿ ಕ್ರೈಸ್ತರೆಂದು ಗುರುತಿಸುವ ಮೂಲಕ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ ಆಯೋಗದ ಮೂಲಕ ಸರಕಾರ ಕೈಹಾಕಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಮೂಲಕ ವಂಚನೆಯಿಂದ ಮತಾಂತರಗೊಂಡ ಸಣ್ಣ ಸಣ್ಣ ಸಮುದಾಯಗಳಲ್ಲಿರುವ ಅಮಾಯಕರ ಮತಾಂತ ರಕ್ಕೆ ಸಂಚು ರೂಪಿಸಲು ಇನ್ನಷ್ಟು ಅವಕಾಶವನ್ನು ಸರಕಾರ ನೀಡಿದೆ ಎಂದವರು ಹೇಳಿದ್ದಾರೆ. ಇದರಿಂದ ಮೂಲ ಸಮುದಾಯದ ಮೀಸಲಾತಿ ಸೌಲಭ್ಯಗಳನ್ನು ಅವರು ಪಡೆದು ದುರ್ಬಲ ಜಾತಿಗಳನ್ನು ವಂಚಿಸಲು ಅವಕಾಶವಾ ಗಲಿದೆ ಎಂದು ದೂರಿದ್ದಾರೆ.

ಒಂದು ಜಾತಿಯಿಂದ ಬೇರ್ಪಟ್ಟ ನಂತರ ಮೂಲ ಜಾತಿಯೊಂದಿಗೆ ಕ್ರೈಸ್ತ ಹೆಸರಿನ ನಮೂದಿಸುವಿಕೆ ವಿವಿಧ ಜಾತಿ ಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಇದು ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ಎಂದವರು ಪತ್ರದಲ್ಲಿ ಆರೋಪಿಸಿದ್ದಾರೆ.

ಆದ್ದರಿಂದ ಸುಮಾರು 50ಕ್ಕೂ ಅಧಿಕ ವಿವಿಧ ಜಾತಿಗಳ ಮುಂದೆ ನಮೂದಿಸಿರುವ ಕ್ರೈಸ್ತ ಎಂಬ ಉಲ್ಲೇಖ ಕೈಬಿಡುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago