Featured

ಉಡುಪಿ : ಹಿಜಾಬ್‌ಗೆ ಅನುಮತಿ; ರಾಜಕೀಯಕ್ಕಾಗಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ : ಯಶ್‌ಪಾಲ್ ಸುವರ್ಣ ಎಚ್ಚರಿಕೆ  – vishwanews24

ಉಡುಪಿ: ಹಿಜಾಬ್‌ಗೆ ಅನುಮತಿ; ಶಿಕ್ಷಣ ವ್ಯವಸ್ಥೆಯನ್ನ ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ ಬಡವ ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ: 

2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ದುರುದ್ದೇಶ ಪೂರ್ವಕವಾಗಿ ಹಿಜಾಬ್ ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿ ರಾಜ್ಯ ಹಾಗೂ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿ ಶಿಕ್ಷಣ ವ್ಯವಸ್ಥೆಗೆ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟಾಗಿದ್ದು, ಈ ಸಂದರ್ಬದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಇಂದೂ ಮರೆತಿಲ್ಲ.

ಕೇವಲ ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ಮುಂದಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡುವ ಸರ್ಕಾರ ಕೇಸರಿ ಶಾಲು ಧರಿಸಲು ಅವಕಾಶ ನೀಡದೆ ಮತ್ತೊಮ್ಮೆ ತನ್ನ ಹಿಂದೂ ವಿರೋಧಿ ನಿಲುವನ್ನು ಮುಂದುವರೆಸಿದೆ.

ಇದನ್ನೂ ಓದಿ: 

ಈ ಹಿಂದೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ’ ಎಂದು ಹೈಕೋರ್ಟ್‍ನ ತ್ರಿಸದಸ್ಯ ಪೀಠ ನೀಡಿದ ತೀರ್ಪು ನೀಡಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡಲು ಅತಿ ಮುತುವರ್ಜಿ ವಹಿಸುತ್ತಿರುವ ರಾಜ್ಯ ಸರಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

4 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

6 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

6 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

6 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

7 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

7 hours ago