Featured

ಉಡುಪಿ ಹಿಜಾಬ್‌ ವಿವಾದ  :  ಬೇರೆ ವಿದ್ಯಾರ್ಥಿಗಳ ಜೊತೆ ನಮಗೆ ತಾರತಮ್ಯ ಮಾಡಬೇಡಿ ; ಆನ್‌ಲೈನ್‌ ಕ್ಲಾಸಿಗೆ ವಿದ್ಯಾರ್ಥಿನಿಯರ ವಿರೋಧ – Vishwanews24

ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು..

ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ..

ಹಿಜಾಬ್‌ ಇಲ್ಲದೆ ತರಗತಿಯಲ್ಲಿ ಕುಳಿತುಕೊಳ್ಳಲು ನಮಗೆ ಕಂಫರ್ಟ್ ಆಗುವುದಿಲ್ಲ..

ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ..

ಉಡುಪಿ: ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ನಮಗೆ ಯಾವುದೇ ಆನ್ಲೈನ್ ಕ್ಲಾಸ್ ಗಳು ಬೇಡ ಮತ್ತೆ ನಮ್ಮ ಮಧ್ಯೆ ತಾರತಮ್ಯ ಮಾಡಬೇಡಿ ಎಂದು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.

ಅವರು ಗುರುವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸರಕಾರಿ ಕಾಲೇಜಿನಲ್ಲಿ ನಮಗೆ ನಮ್ಮ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಸಾಧ್ಯ. ಸಾಯನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್ಲೈನ್ ಕ್ಲಾಸ್ ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ನಮಗೆ ಒಂದು ತಿಂಗಳ ತರಗತಿ ನಷ್ಟ ಆಗಿದೆ. ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ ಆದರೆ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ.

ಇದನ್ನೂ ಓದಿ :

ಸರಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ತಾರತಮ್ಯವನ್ನು ಮಾಡಬೇಡಿ. ನಮಗೆ ನಡೆಯುತ್ತಿರುವ ದೌರ್ಜನ್ಯ ಪ್ರತಿದಿನ ಮಾಧ್ಯಮಗಳಲ್ಲಿ ನಮ್ಮ ಸುದ್ದಿಗಳನ್ನು ನೋಡಿ ಇತರ ಮುಸ್ಲಿಂ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ ಅವರು ನೈತಿಕವಾಗಿ ನಮಗೆ ಬೆಂಬಲ ಸೂಚಿಸಿದ್ದಾರೆ ಆದರೆ ಯಾರೂ ಮುಂದೆ ಬರುತ್ತಿಲ್ಲ. ಅವರು ಎಜುಕೇಶನ್ ತುಂಬಾ ಇಂಪಾರ್ಟೆಂಟ್ ಎಂದು ನಮ್ಮ ಜೊತೆ ಪ್ರತಿಭಟನೆಗೆ ಬರುತ್ತಿಲ್ಲ ಕ್ಲಾಸಿಗೆ ಹೋಗುತ್ತಿದ್ದಾರೆ ನಮಗೂ ಶಿಕ್ಷಣ ಮುಖ್ಯ ಅದರ ಜೊತೆಗೆ ಧರ್ಮ ಮತ ನಮ್ಮ ಹಿಜಬ್ ಹಕ್ಕು ಮುಖ್ಯ. ಹಿಜಾಬ್‌ ಇಲ್ಲದೆ ತರಗತಿಯಲ್ಲಿ ಕುಳಿತುಕೊಳ್ಳಲು ನಮಗೆ ಕಂಫರ್ಟ್ ಆಗುವುದಿಲ್ಲ. ಕಾಲೇಜಿನ ಸಮವಸ್ತ್ರದ ಶಾಲೆಯಲ್ಲಿ ನಾವು ಜಾಗೃತ ಯಾರಿ ಸಿ ಅದನ್ನು ತೊಟ್ಟುಕೊಂಡು ಕ್ಲಾಸಿನಲ್ಲಿ ಕುಳಿತುಕೊಳ್ಳುತ್ತೇವೆ. ನಾವು ಬೇರೆ ಯಾವುದೇ ವಿಚಾರಕ್ಕೆ ಹಠಹಿಡಿದು ಕುಳಿತುಕೊಂಡಿಲ್ಲ ಎಂದರು

ಕಾಲೇಜಲ್ಲಿ ಹಿಂದಿನಿಂದಲೂ ಪರಂಪರೆಯಿದೆ ಹಿಜಬ್ ಗೆ ಅವಕಾಶ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ ಆದರೆ ನಮ್ಮ ಸೀನಿಯರ್ಗಳು ಧರಿಸುತ್ತಿದ್ದನ್ನು ನಾವು ನೋಡಿದ್ದೇವೆ. ನಮಗೆ ಹಿಜಬ್ ಧರಿಸಿ ಕ್ಲಾಸ್ ಗೆ ಬರಲು ಆಡಳಿತ ಮಂಡಳಿಗೆ ನಮ್ಮ ಶಿಕ್ಷಣದ ಬಗ್ಗೆ ಯಾವುದೇ ಒಲವು ಇಲ್ಲ. ನಾವು ಉತ್ತಮವಾದ ಶಿಕ್ಷಣ ಪಡೆದು ಮುಂದೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂದು ಇದ್ದೇವೆ ಎಂದರು.

ಇದನ್ನೂ ಓದಿ :

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

18 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

19 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

19 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

19 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

20 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

21 hours ago