ಉಡುಪಿ ಹಿಜಾಬ್ / ಕೇಸರಿ ವಿವಾದ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ, ಸುಳ್ಳು ವದಂತಿ ಹಬ್ಬಿಸದಂತೆ ಡಿಸಿ ಎಚ್ಚರಿಕೆ – Vishwanews24
ಉಡುಪಿ ಹಿಜಾಬ್ / ಕೇಸರಿ ವಿವಾದ : ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ, ಸುಳ್ಳು ವದಂತಿ ಹಬ್ಬಿಸದಂತೆ ಡಿಸಿ ಎಚ್ಚರಿಕೆ – Vishwanews24
ಉಡುಪಿ: ಹಿಜಾಬ್ ಕೇಸರಿ ವಿವಾದಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ, ಸುಳ್ಳು ವದಂತಿಗಳನ್ನು ಹರಡಬಾರದು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರವಾಗಿ ವಿವಿಧ ಸಂಘಟನೆಗಳು ಮತ್ತು ಸಮಾಜದ ಮುಖಂಡರ ಸಭೆ ಕರೆದು ನ್ಯಾಯಾಲಯದ ಮಧ್ಯಾಂತರ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಸೂಚನೆ ನೀಡಲು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ.
ಯಾವುದೇ ಗೊಂದಲ, ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ಮಕ್ಕಳ ಶೈಕ್ಷಣಿಕ ಚಟುವಟಿಕೆ ಮುಂದುವರಿಯಬೇಕು. ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.ಸಮವಸ್ತ್ರದ ವಿವಾದದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಧ್ಯಾಂತರ ಆದೇಶ ಪಾಲಿಸಲು ಜಿಲ್ಲೆಯ ಎಲ್ಲ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ, ಕಾಲೇಜು ಆಡಳಿತ ಮಂಡಳಿ, ಕಾಲೇಜು ಶಿಸ್ತು ಸಮಿತಿ ಮತ್ತು ಶಿಕ್ಷಕರ, ಪಾಲಕರ ಸಭೆ ಕರೆದು ಕಾಲೇಜಿನಲ್ಲಿ ಯಾವುದೇ ಗೊಂದಲ ಆಗದಂತೆ ಕ್ರಮ ಕೈಗೊಳ್ಳಲು ಪದವಿಪೂರ್ವ, ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದ್ದಾರೆ.
ಭಾರತಕ್ಕಿಂದು ಕರಾಳ ದಿನ : ಪುಲ್ವಾಮಾ ದಾಳಿಗೆ 3 ವರ್ಷ ; ಹುತ್ಮಾತ ವೀರ ಯೋಧರಿಗೆ ಗೌರವ ನಮನ – Vishwanews24
