Featured

ಉಡುಪಿ: ಹಿಜಾಬ್, ಕೇಸರಿ ಶಾಲು ವಿವಾದ ; ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ: ಹಿಜಾಬ್, ಕೇಸರಿ ಶಾಲು ವಿವಾದ ; ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು, ಸರ್ಕಾರಿ ಸಂಸ್ಥೆ, ಸಂಘಟನೆ ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ, ಅವಹೇಳನಕಾರಿಯಂತಹ ಘೋಷಣೆ, ಅವಾಚ್ಯ ಶಬ್ಧಗಳ ಬಳಕೆ, ಪ್ರಚೋದನಾಕಾರಿ ಭಾಷಣ ಇತ್ಯಾದಿ ಚಟುವಟಿಕೆಗಳನ್ನು ಮಾಡಬಾರದು.

ಇದನ್ನೂ ಓದಿ :

ಇನ್ನು ದೊಣ್ಣೆ, ಕತ್ತಿ, ಈಟಿ, ಬಂದೂಕು, ಚಾಕು, ಲಾಠಿ ಅಥವಾ ದೈಹಿಕ ಹಿಂಸೆಯನ್ನು ಉಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದು, ಪಟಾಕಿ ಸಿಡಿಸುವುದು, ಸ್ಪೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಹಾಗೂ ರಾಜಕೀಯ ಸಭೆ ಸಮಾರಂಭ ನಡೆಸುವುದು, ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು, ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದು, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago