ಉಡುಪಿ: ರಾಜ್ಯದಲ್ಲಿ ಹಿಜಾಬ್ ಗಲಾಟೆ ಆರಂಭವಾಗಿದ್ದ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ದಾಖಲಾತಿ ಆರಂಭಗೊಂಡಿದೆ. ಈ ಬಾರಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಸಂಖ್ಯೆ ಹೆಚ್ಚಳವಾಗಿದೆ. ಇದೇ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಪರವಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯೋದಾಗಿ ಹಠ ಮಾಡಿದ್ದರು. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆ ಗೈರಾಗಿದ್ದರು.
ಇದೀಗ ಇದೇ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ದಾಖಲಾತಿ ಪಡೆದುಕೊಂಡಿದ್ದಾರೆ. ಹಿಜಾಬ್ ಗಲಾಟೆ ಬಳಿಕ ಉಡುಪಿ ಸರ್ಕಾರಿ ಮಹಿಳಾ ಪಿಯು ಕಾಲೇಜಿಗೆ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಕಡಿಮೆ ಆಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈಗಾಗಲೇ ಪ್ರಥಮ ಪಿಯುಸಿಗೆ 40 ವಿದ್ಯಾರ್ಥಿನಿಯರು ದಾಖಲಾತಿ ಪಡೆದುಕೊಂಡಿದ್ದು, ಹಿಜಾಬ್ ತೆಗೆದು ತರಗತಿಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಇನ್ನೂ ಈ ಕುರಿತು ಕಾಲೇಜಿನ ಸಿಡಿಸಿ ಅಧ್ಯಕ್ಷ, ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ. ದ್ವಿತೀಯ ಪಿಯುಗೆ 253 ವಿದ್ಯಾರ್ಥಿಗಳು ತೆರಳಿದ್ದು, ಪ್ರಥಮ ಪಿಯಗೆ 335 ವಿದ್ಯಾರ್ಥಿಗಳು ಅಡ್ಮಿಷನ್ ಮಾಡಿಸಿಕೊಂಡಿದ್ದಾರೆ. ಇನ್ನೂ 100 ಅರ್ಜಿಗಳು ಹೋಗಿದ್ದು, SSLC ಪೂರಕ ಪರೀಕ್ಷೆ ಬಳಿಕ ಉಳಿದ ಸ್ಥಾನಗಳು ಭರ್ತಿ ಆಗಲಿವೆ. ವಿಜ್ಞಾನದ ಎರಡು ಮತ್ತು ವಾಣಿಜ್ಯದ ಒಂದು ವಿಭಾಗ ಹೆಚ್ಚಳ ಮಾಡಲಾಗಿದೆ. ಕಂಪ್ಯೂಟರ್ ಸೈನ್ಸ್, ಜೀವಶಾಸ್ತ್ರ ಮತ್ತು ಭೌತಶಾಸ್ತ್ರದ ಹೊಸ ಪ್ರಯೋಗಾಲಯಗಳನ್ನು ಆರಂಭಿಸಲಾಗಿದೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…