ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ಪಟ್ಟು ಹಿಡಿದಿದ್ದ ಉಡುಪಿಯ ಇಬ್ಬರು ಹಿಜಾಬ್ ಹೋರಾಟಗಾರ್ತಿಯರು ಅವಕಾಶ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯದೆ ವಾಪಸ್ಸಾಗಿದ್ದಾರೆ.
ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಆರಂಭವಾಗಿದ್ದು, ಉಡುಪಿಯಲ್ಲಿ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಆಲಿಯಾ ಅಸ್ಸಾದಿ ಮತ್ತು ರೇಶಮ್ಎಂಬ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಎದುರಿಸಬೇಕಿತ್ತು. ಆದರೆ ಇಬ್ಬರೂ ನಿನ್ನೆವರೆಗೂ ಪ್ರವೇಶ ಪತ್ರ ಪಡೆದಿರಲಿಲ್ಲ. ಇಂದು ಪರೀಕ್ಷೆ ಆರಂಭವಾಗುವ ಮುನ್ನ ಕೊನೆ ಕ್ಷಣದಲ್ಲಿ ಪ್ರವೇಶ ಪತ್ರ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ. ಆದರೆ ಹಿಜಾಬ್ ತೆಗೆಯಲು ಒಪ್ಪದೆ ಆಲಿಯಾ ಅಸಾದಿ ಹಾಗೂ ರೇಷ್ಮಾ ಪರೀಕ್ಷೆ ಬರೆಯುವುದಕ್ಕೆ ಬಂದಾಗ, ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನಿರಾಕರಿಸಲಾಯಿತು.
ಇದರಿಂದ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಇಬ್ಬರು ವಿದ್ಯಾರ್ಥಿನಿಯರು ಪಟ್ಟು ಹಿಡಿದು ಪರೀಕ್ಷಾ ಕೇಂದ್ರದ ಮುಂಭಾಗದಲ್ಲಿ ಹೈಡ್ರಾಮ ಸೃಷ್ಟಿಸಿದರು. ಆದರೆ ಕೋರ್ಟ್ ಆದೇಶವಿರುವುದರಿಂದ ಹಿಜಾಬ್ ತೆಗೆದಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಸಿಬಂದಿ ಸೂಚಿಸಿದ್ದರಿಂದ ಬಳಿಕ ಪರೀಕ್ಷೆಗೆ ಹಾಜರಾಗದೇ ಮನೆಗೆ ಹಿಂತಿರುಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…