Featured

ಉಡುಪಿ : ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ -Vishwanews24

ಉಡುಪಿ : ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಮೌಲ್ಯಾಧಾರಿತ ತೀರ್ಪು: ಗುರುಪ್ರಸಾದ್ ಶೆಟ್ಟಿ ಕಟಪಾಡಿ -Vishwanews24

ಉಡುಪಿ : ಹಿಜಾಬ್ ಗೂ ಶಿಕ್ಷಣಕ್ಕೂ ಹೊಂದಾಣಿಕೆ ಸಲ್ಲದು. ಉಚ್ಚ ನ್ಯಾಯಾಲಯ ಹಿಜಾಬ್ ಪ್ರಕರಣದಲ್ಲಿ ನೀಡಿದ ತೀರ್ಪು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪೂರಕವಾದ ಉತ್ತಮ ಮೌಲ್ಯಾಧಾರಿತ ತೀರ್ಪು ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ.

ಶಿಕ್ಷಣವು ವಿದ್ಯಾರ್ಥಿಗಳ ಜೀವನದ ದಾರಿದೀಪ. ತಮ್ಮ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ಒಂದು ಸುಗಮ ಮಾರ್ಗ. ಸಂವಿಧಾನಾತ್ಮಕ, ದೇಶದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರತೀಕವಾಗಿರುವ ಶಿಕ್ಷಣವನ್ನು ವಿದ್ಯಾರ್ಥಿ ಸಮುದಾಯ ಹಾಗೂ ದೇಶವಾಸಿಗಳು ಅತೀ ಧನ್ಯತೆಯಿಂದ ಗೌರವಿಸಬೇಕಾಗಿದೆ.

ಹಿಜಾಬ್ ಪ್ರಕರಣ ಉಡುಪಿಯಲ್ಲಿ ನಡೆದ ವಸ್ತ್ರ ಸಂಹಿತೆಯ ಒಂದು ಸರಳವಾದ ವಿಷಯವಾಗಿತ್ತು. ಆದರೆ ಕಾಣದ ಕೈಗಳಿಂದ ಈ ವಿಚಾರ ಇಡೀ ದೇಶ ಹಾಗೂ ಹೊರ ದೇಶಗಳಲ್ಲಿ ಗೊಂದಲವನ್ನು ಸೃಷ್ಠಿಸಿ, ನ್ಯಾಯಾಲಯದ ಮೆಟ್ಟಲೇರಿ ಇದೀಗ ಉಚ್ಛ ನ್ಯಾಯಾಲಯದ ತೀರ್ಪಿನಿಂದ ಸುಖಾಂತ್ಯಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಸಮಾನತೆ ಮತ್ತು ಸಮನ್ವಯತೆಯನ್ನು ಸಾಧಿಸುವ ಒಂದು ಸಾಧನವಾಗಿದೆ. ಜೀವನದ ಮೌಲ್ಯಾಧಾರಿತ ಘಟ್ಟಗಳನ್ನು ಹಾದು ಭವಿಷ್ಯದ ಗುರಿಯನ್ನು ತಲುಪುವಲ್ಲಿ ಶಿಕ್ಷಣದ ಪಾತ್ರ ಬಹಳ ಹಿರಿದಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇಚ್ಚಾಶಕ್ತಿಯಿಂದ ತೊಡಗಿಸಿಕೊಳ್ಳುವಂತಹ ಸಂದರ್ಭದಲ್ಲಿ ಇಂತಹ ಅನಪೇಕ್ಷಿತ ಘಟನೆಗಳು ಅದಕ್ಕೆ ಅಡ್ಡಿಯಾಗಬಾರದು.

ಹಿಜಾಬ್ ಪ್ರಕರಣದಂತಹ ಘಟನೆಗಳಿಂದ ಯಾವುದೇ ಒಂದು ಧರ್ಮ, ಪಂಥಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವ ಸನ್ನಿವೇಶದಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾದರೆ ಅದರಿಂದ ದೇಶದ ಆರೋಗ್ಯಕರ ವಾತಾವರಣಕ್ಕೆ ಧಕ್ಕೆಯುಂಟಾಗುವುದು ಸಹಜ. ಆದುದರಿಂದ ಹಿಜಾಬ್ ಹಾಗೂ ವಸ್ತ್ರ ಸಂಹಿತೆಯ ಬಗ್ಗೆ ಉಚ್ಛ ನ್ಯಾಯಾಲಯ ನೀಡಿರುವ ನ್ಯಾಯಯುತ ತೀರ್ಪನ್ನು ಎಲ್ಲರೂ ಸ್ವಾಗತಿಸಿ ಎಲ್ಲಾ ಗೊಂದಲಗಳಿಗೆ ಇತಿಶ್ರೀ ಹಾಡುವುದು ಇಂದಿನ ಅಗತ್ಯತೆಯಾಗಿದೆ.

ನಡೆದ ಎಲ್ಲಾ ಅನಪೇಕ್ಷಿತ ಘಟನೆಗಳನ್ನು ಮರೆತು, ಯಾವುದೇ ಬಾಹ್ಯ ಸಂಘಟನೆಗಳ ಅಥವಾ ವ್ಯಕ್ತಿಗಳ ಒತ್ತಡಕ್ಕೆ ಮಣಿಯದೇ ವಿದ್ಯಾರ್ಥಿಗಳು ಯಥಾವತ್ತಾಗಿ

ಶಾಲಾ ಕಾಲೇಜುಗಳಿಗೆ ತೆರಳಿ ಉತ್ತಮ ಶಿಕ್ಷಣವನ್ನು ಪಡೆದು ತಮ್ಮ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಗುರುಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago