Featured

ಉಡುಪಿ : ಹಿಜಾಬ್ ವಿವಾದದ ಬಗ್ಗೆ ಶಿಕ್ಷಣ ಸಚಿವರ ನಿಲುವು ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ : ಹಿಜಾಬ್ ವಿವಾದದ ಬಗ್ಗೆ ಶಿಕ್ಷಣ ಸಚಿವರ ನಿಲುವು ಸ್ವಾಗತಾರ್ಹ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾದ ವಿವಾದದ ಬಗ್ಗೆ ಕಾಲೇಜು ಧಾರ್ಮಿಕ ಆಚರಣೆಯ ಕೇಂದ್ರವಲ್ಲ ಈ ಬಗ್ಗೆ ಯಾವುದೇ ಅಶಿಸ್ತಿಗೆ ಅವಕಾಶವಿಲ್ಲವೆನ್ನುವ ಮೂಲಕ ಕಠಿಣ ನಿಲುವು ತಳೆದ ಶಿಕ್ಷಣ ಸಚಿವರಾದ ಶ್ರೀ ನಾಗೇಶ್ ರವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹಿಜಾಬ್ ವಿಚಾರದಲ್ಲಿ ಬೆರಳೆಣಿಕೆಯ ವಿದ್ಯಾರ್ಥಿಗಳು ಗೊಂದಲ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಿ ಇತರ ವಿದ್ಯಾರ್ಥಿಗಳ ವ್ಯಾಸಾಂಗಕ್ಕೂ ಸಮಸ್ಯೆ ಸೃಷ್ಟಿಸುತ್ತಿದ್ದರೆ.

ಮತೀಯವಾದಿ ಸಂಘಟನೆಗಳು ಕೆಲವು ಸಮಾಜಘಾತುಕ ಶಕ್ತಿಗಳ ಕುಮ್ಮಕ್ಕಿನಿಂದ ಈ ಘಟನೆಯನ್ನು ರಾಜಕೀಯ ಉದ್ದೇಶದಿಂದ ರಾಷ್ಟ್ರಮಟ್ಟದಲ್ಲಿ ಅಪಪ್ರಚಾರ ನಡೆಸಿ ಕಾಲೇಜಿನ ಗೌರವಕ್ಕೆ ಮಸಿ ಬಳಿಯುವ ಕಾರ್ಯದಲ್ಲಿ ವ್ಯಸ್ತರಾಗಿದ್ದು ಶಿಕ್ಷಣ ವ್ಯವಸ್ಥೆಗೆ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಗೆ ಕಳಂಕ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾಲೇಜಿನಲ್ಲಿ ಸಮವಸ್ತ್ರದ ನಿಯಮಗಳನ್ನು ಪಾಲಿಸದೆ ಹಿಜಾಬ್ ಬಗ್ಗೆ ವಿವಾದ ಸೃಷ್ಟಿಸುವ ವಿದ್ಯಾರ್ಥಿನಿಯರ ವರ್ತನೆ ದುರದೃಷ್ಟಕರ.

ಕಾಲೇಜಿನ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು ಎಲ್ಲಾ ವಿದ್ಯಾರ್ಥಿಗಳ ಕರ್ತವ್ಯ. ತಮ್ಮ ಧಾರ್ಮಿಕ ಆಚರಣೆಗಳಿಗಾಗಿ ಕಾಲೇಜಿನ ಶಿಸ್ತು ಉಲ್ಲಂಘಿಸಲು ಶಾಲಾ ಆಡಳಿತ ಮಂಡಳಿ ಅವಕಾಶ ನೀಡುವುದಿಲ್ಲ ಹಾಗೂ ಈ ಕಾಲೇಜು ನಿಯಮವನ್ನು ಪಾಲಿಸಲು ಕಷ್ಟ ವಾದಲ್ಲಿ ತಮ್ಮ ಧಾರ್ಮಿಕ ಆಚರಣೆಗೆ ಅವಕಾಶವಿರುವಲ್ಲಿ ಶಿಕ್ಷಣ ಮುಂದುವರಿಸಲಿ, ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago