ಮಲ್ಪೆ : ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಫೆಬ್ರವರಿ 21 ರ ಸೋಮವಾರ ರಾತ್ರಿ 9.30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ.
ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಶಿಫಾ ಅವರ ತಂದೆ ಹೈದರ್ ಅಲಿ ಅವರಿಗೆ ಸೇರಿದ ‘ಬಿಸ್ಮಿಲ್ಲಾ ಹೋಟೆಲ್’ ಮೇಲೆ ಸುಮಾರು 50 ಜನರ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ತಿಳಿದುಬಂದಿದೆ.
ಇದರಿಂದ ರೆಸ್ಟೋರೆಂಟ್‌ನ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.
ದುಷ್ಕರ್ಮಿಗಳ ಗುಂಪು ಹೈದರ್ ಅವರ ಮಗ ಸೈಫ್ (20) ಮೇಲೆ ಹಲ್ಲೆ ನಡೆಸಿರುವ ಆರೋಪವು ಕೇಳಿಬಂದಿದು ಸದ್ಯ ಶಿಫಾ ಸಹೋದರ ಸೈಫ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…