Featured

ಉಡುಪಿ ಹಿಜಾಬ್ ವಿವಾದ : ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ  : ಹಿಜಬ್ ಹೋರಾಟಗಾರ್ತಿಯರ ಮನವಿ – Vishwanews24

ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ..

ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ..

ಉಡುಪಿ: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.

ಇದನ್ನೂ ಓದಿ :

ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.

ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು.

ಇದನ್ನೂ ಓದಿ :

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago